ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ : ದಿನಸಿ ವಸ್ತುಗಳನ್ನು ಸಾಗಿಸುತ್ತಿದ್ದ ಓಮಿನಿ ವಾಹನ ಹಳ್ಳಕ್ಕೆ ಬಿದ್ದಿದೆ

ಚಿಕ್ಕಬಳ್ಳಾಪುರ: ಬೈಕ್ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ದಿನಸಿ ಸಾಮಗ್ರಿಗಳ ಓಮಿನಿ ಹಳ್ಳಕ್ಕೆ ಉರುಳಿದ ಘಟನೆ ಚಿಕ್ಕಬಳ್ಳಾಪುರ ನಗರದ ಹೊರವಲಯದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನಗರದ ಹೊರವಲಯದ ವಾಪಸಂದ್ರ ಬ್ರಿಡ್ಜ್ ಬಳಿ ಈ ಅಪಘಾತ ಸಂಭವಿಸಿದೆ. ಗ್ರಾಮೀಣ ಭಾಗದ ಅಂಗಡಿಗಳಿಗೆ ದಿನಸಿ ವಸ್ತುಗಳನ್ನು ಸಾಗಿಸುತ್ತಿದ್ದ ಓಮಿನಿ ವಾಹನ, ರಸ್ತೆಯಲ್ಲಿ ಅಡ್ಡ ಬಂದ ಬೈಕೊಂದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ಹಳ್ಳಕ್ಕೆ ಬಿದ್ದಿದೆ. ಚಿಕ್ಕಬಳ್ಳಾಪುರ ನಿವಾಸಿ ವಿಜಯ್ ಎಂಬಾತ ವಾಹನ ಚಾಲನೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎನ್ನಲಾಗಿದ್ದು, ವಾಹನ ಪಲ್ಟಿಯಾದ ಪರಿಣಾಮ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕ್ರೇನ್ ಸಹಾಯದಿಂದ ಹಳ್ಳಕ್ಕೆ ಬಿದ್ದ ಕಾರನ್ನು ಹೊರತೆಗೆಯಲು ಸಂಚಾರಿ ಪೊಲೀಸರು ಮತ್ತು ಸ್ಥಳೀಯರು ಹರಸಾಹಸಪಟ್ಟರು. ಸ್ಥಳಕ್ಕೆ ಭೇಟಿ ನೀಡಿದ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಕ್ಕತೇಕಹಳ್ಳಿ ಡಿ ಶಿವಕುಮಾರ್ ಪಬ್ಲಿಕ್ ನೆಕ್ಸ್ಟ್ ಚಿಕ್ಕಬಳ್ಳಾಪುರ

Edited By : Somashekar
PublicNext

PublicNext

28/04/2026 06:17 pm

Cinque Terre

15.42 K

Cinque Terre

0