ಮೂಡಿಗೆರೆ: ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಲಭ್ಯವಿಲ್ಲದೆ ನೂರಾರು ರೋಗಿಗಳು ಚಿಕಿತ್ಸೆಗಾಗಿ ಪರದಾಡುವಂತಾದ ಘಟನೆ ಮೂಡಿಗೆರೆ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.
ಆಸ್ಪತ್ರೆಯಲ್ಲಿ ಚೀಟಿ ಪಡೆದ ರೋಗಿಗಳು ವೈದ್ಯರ ಕಾಯುವಿಕೆಯಲ್ಲಿ ತೊಡಗಿದ್ದರೂ, ಒಬ್ಬರೇ ಒಬ್ಬ ವೈದ್ಯರು ಚಿಕಿತ್ಸೆಗೆ ಸಿಗದೆ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಸಕಿ ನಯನಾ ಮೋಟಮ್ಮ ಅವರು ಆಸ್ಪತ್ರೆಯಲ್ಲಿ ವೈದ್ಯರೊಂದಿಗೆ ಸಭೆ ನಡೆಸಿದ್ದರು ಎನ್ನಲಾಗಿದ್ದು, ಎಲ್ಲಾ ವೈದ್ಯರು ಈ ಸಭೆಯಲ್ಲಿ ಭಾಗಿಯಾಗಿದ್ದರಿಂದ ಹೊರಗೆ ರೋಗಿಗಳಿಗೆ ಚಿಕಿತ್ಸೆ ಸಿಗದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ತಾಲ್ಲೂಕು ಆಡಳಿತದ ಈ ನಡೆಯಿಂದ ರೋಗಿಗಳು ಮತ್ತು ಅವರ ಸಂಬಂಧಿಕರು ಕಾದು ಕಾದು ಸುಸ್ತಾದ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದರು.
PublicNext
28/04/2026 06:51 pm
LOADING...