ಮಡಿಕೇರಿ : ನಮ್ಮ ಗಣತಿ ನಮ್ಮ ಅಭಿವೃದ್ಧಿ 2027 ರ ಜನಗಣತಿ ಸಂಬಂಧ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಗಣತಿ ಕಾರ್ಯ ಕೈಗೊಂಡಿದ್ದು, ಈ ತಿಂಗಳ ಅಂತ್ಯದೊಳಗೆ ಶೇಕಡಾವಾರು ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಮನೆ ಮನೆಗೆ ಭೇಟಿ ನೀಡಿ ಗಣತಿ ಕಾರ್ಯ ಪ್ರಗತಿಯಲ್ಲಿ ಕೊಡಗು ಜಿಲ್ಲೆ 15ನೇ ಸ್ಥಾನದಲ್ಲಿದ್ದು, ಆದಷ್ಟು ಶೀಘ್ರ ಗಣತಿ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ತಹಶೀಲ್ದಾರರು, ತಾ.ಪಂ.ಇಒಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಸೇರಿದಂತೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ತಮ್ಮ ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಮನೆ ಬಿಟ್ಟು ಹೋಗದಂತೆ ಗಣತಿ ಕಾರ್ಯವನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಮನೆ ಮನೆ ಗಣತಿ ಕಾರ್ಯಕ್ಕಾಗಿ ಈಗಾಗಲೇ ಜಿಲ್ಲೆಯಲ್ಲಿ 999 ಗಣತಿದಾರರನ್ನು ನಿಯೋಜಿಸಲಾಗಿದೆ. ಮಡಿಕೇರಿ ತಾಲ್ಲೂಕಿಗೆ 187, ಮಡಿಕೇರಿ ನಗರಕ್ಕೆ 61, ಸೋಮವಾರಪೇಟೆ ತಾಲ್ಲೂಕಿಗೆ 186, ಸೋಮವಾರಪೇಟೆ ಪಟ್ಟಣ ಪಂಚಾಯಿತಿಗೆ 12, ವಿರಾಜಪೇಟೆ ತಾಲ್ಲೂಕಿಗೆ 133, ವಿರಾಜಪೇಟೆ ಪುರಸಭೆ ವ್ಯಾಪ್ತಿಗೆ 36, ಪೊನ್ನಂಪೇಟೆ ತಾಲ್ಲೂಕಿನಲ್ಲಿ 161, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 19, ಕುಶಾಲನಗರ ತಾಲ್ಲೂಕಿಗೆ 158, ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ 46, ಒಟ್ಟು 999 ಗಣತಿದಾರರನ್ನು ನಿಯೋಜಿಸಲಾಗಿದೆ. ಜೊತೆಗೆ 172 ಮಂದಿ ಗಣತಿ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಹಾಗೆಯೇ ಶೇ.10 ರಷ್ಟು ಗಣತಿದಾರರನ್ನು ಕಾಯ್ದಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
Kshetra Samachara
28/04/2026 06:56 pm
LOADING...