ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯ ಪ್ರದೇಶ ವ್ಯಾಪ್ತಿಯ ಖಾಸಗಿ ಫಾರ್ಮ್ ಹೌಸ್‌ನಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಸಮವಸ್ತ್ರದಲ್ಲಿ ಕುಟುಂಬದೊಂದಿಗೆ ಜಾಲಿ ರೈಡ್ ನಡೆಸಿದ ವಿಡಿಯೋ ವೈರಲ್ ಆಗಿದೆ.
ಬಿಜೆಪಿ ಕಾರ್ಯಕರ್ತ ನಮೋ ಮಂಜು ಹಾಗೂ ಇತರರು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಕಾಡಂಚಿನ ಪ್ರದೇಶದಲ್ಲಿ ಸಮವಸ್ತ್ರ ಧರಿಸಿ ಮೋಜು ಮಾಡಿರುವ ಪಿಐ ಜಯಕುಮಾರ್ ವಿರುದ್ಧ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
PublicNext
28/04/2026 07:09 pm
LOADING...