ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ- ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ- ಮಧು ಬಂಗಾರಪ್ಪ

ಶಿವಮೊಗ್ಗ : ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಹೊಸನಗರ ತಾಲೂಕಿನ ವ್ಯಾಪ್ತಿಯ ಹುಲಿಕಲ್ ಘಾಟ್ ರಸ್ತೆ ಕಾಮಗಾರಿ ವೇಳೆ ಸಂಭವಿಸಿದ ಮಣ್ಣು ಕುಸಿತ ಅವಘಡದ ಕುರಿತು ಸಮಗ್ರ ವಿವರ ಪಡೆದು, ತಪ್ಪಿತಸ್ಥರ ವಿರುದ್ಧ ಕಾನೂನಾತ್ಮಕ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಮಂಗಳವಾರ ಅವರು ಹೊಸನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ಪ್ರದೇಶಕ್ಕೆ ಭೇಟಿ ನೀಡಿ, ಕಾಮಗಾರಿ ಮತ್ತು ಮಣ್ಣು ಕುಸಿತದ ಪ್ರದೇಶವನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಿದ ನಂತರ ಮಾತನಾಡಿದರು.

ಹುಲಿಕಲ್ ರಸ್ತೆ ತಡೆಗೋಡೆ ನಿರ್ಮಾಣ ವೇಳೆ ಮಣ್ಣು ಕುಸಿತ ಅವಘಡ ಸಂಭವಿಸಿ ಮೂರು ಕಾರ್ಮಿಕರು ಮೃತಪಟ್ಟಿದ್ದು, ಸೂಕ್ತ ರೀತಿಯ ಮುನ್ನೆಚ್ಚರಿಕೆ ವಹಿಸದೆ ಕಾಮಗಾರಿ ನಡೆಸಿದ ತಪ್ಪಿತಸ್ಥ ಅಧಿಕಾರಿ, ಗುತ್ತಿಗೆದಾರರ ವಿರುದ್ಧ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಹಾಗೂ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ನ್ಯಾಯ ಒದಗಿಸಲಾಗುವುದು ಎಂದು ತಿಳಿಸಿದರು. ಹಾಗೂ ಲೋಕೋಪಯೋಗಿ ಸಚಿವರೊಂದಿಗೆ , ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತುರ್ತಾಗಿ ವ್ಯವಸ್ಥಿತ ರೀತಿಯ ಕಾಮಗಾರಿ ನಡೆಸಲು ಕ್ರಮ ವಹಿಸಲಾಗುವುದು ಎಂದ ಅವರು ಈ ಭಾಗದ ಜನಸಾಮಾನ್ಯರ ಅಹವಾಲುಗಳಿಗೆ ಪರಿಹಾರ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದ್ದು, ಮುಂದೆಯೂ ಮಾಡುತ್ತೇನೆಂದು ಭರವಸೆ ನೀಡಿದರು.

ಮಳೆಯಿಂದ ಭೂಕುಸಿತ ಉಂಟಾಗಿದ್ದ ಹುಲಿಕಲ್ ಘಾಟ್ ಸ್ಥಳದಲ್ಲಿ ಶಾಶ್ವತ ಪರಿಹಾರಕ್ಕಾಗಿ ಲೋಕೋಪಯೋಗಿ ಇಲಾಖೆಯ ವತಿಯಿಂದ ತಡೆಗೋಡೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಮೊದಲ ಹಂತದಲ್ಲಿ ರೂ.‌435 ಲಕ್ಷಗಳ ಅನುದಾನದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಸುಮಾರು 80 ಮೀಟರ್ ಉದ್ದದ ಆರ್.ಸಿ.ಸಿ. ತಡೆಗೋಡೆಯನ್ನು ಇಲಾಖೆಯ ತಾಂತ್ರಿಕ ವಿನ್ಯಾಸದಂತೆ ನಿರ್ಮಿಸಲಾಗುತ್ತಿದೆ. ಡಿಸೆಂಬರ್ ಮಾಹೆಯಲ್ಲಿ ಕಾಮಗಾರಿ ಆರಂಭವಾಗಿದ್ದು, ಈಗಾಗಲೇ 60 ಮೀಟರ್ ಉದ್ದದ ಭಾಗದಲ್ಲಿ ಹಳೆಯ ಮಣ್ಣನ್ನು ತೆರವುಗೊಳಿಸಿ, ಅಡಿಪಾಯದೊಂದಿಗೆ ಸುಮಾರು 6 ಮೀಟರ್ ಎತ್ತರದವರೆಗೆ ಗೋಡೆ ನಿರ್ಮಿಸಲಾಗಿದೆ ಎಂದರು.

Edited By :
PublicNext

PublicNext

28/04/2026 08:05 pm

Cinque Terre

18.84 K

Cinque Terre

0

ಸಂಬಂಧಿತ ಸುದ್ದಿ