ಹಾನಗಲ್ : ಗ್ರಾಮೀಣ ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ಉದ್ದೇಶದೊಂದಿಗೆ ಮಕ್ಕಳನ್ನು ಶೈಕ್ಷಣಿಕವಾಗಿ ಮುನ್ನಡೆಸುವ ಗುರಿ ಹೊಂದಲಾಗಿದ್ದು, ಇದುವರೆಗೆ 130 ಕ್ಕೂ ಅಧಿಕ ಶಾಲೆಗಳಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಿ ಹಸ್ತಾಂತರಿಸಿದೆ ಎಂದು ಓಸಾಟ್ (OSAAT) ಸಂಸ್ಥೆ ಪ್ರತಿನಿಧಿ ಎನ್.ರಾಮಮೂರ್ತಿ ಹೇಳಿದರು.
ಮಂಗಳವಾರ ಪಟ್ಟಣದ ಶಾಸಕರ ಮಾದರಿ ಶಾಲೆಯ ಆವರಣದಲ್ಲಿ 1.35 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ 8 ಕೊಠಡಿಗಳ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದ ಅವರು ಈ ಹಿಂದಿನ ದಿನಗಳಲ್ಲಿ ಮೈಸೂರು ಭಾಗವನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು.
ಇತ್ತೀಚೆಗೆ ಹಾವೇರಿ ಜಿಲ್ಲೆಯ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ತೀರ್ಮಾನಿಸಿದೆ. ಈ ಶಾಲೆಯಲ್ಲಿ ನಮ್ಮ ಸಂಸ್ಥೆಯ ಭಾವಿಗಳ ಸಹಕಾರದಿಂದ ಇಲ್ಲಿ ಯಾವುದೇ ಖಾಸಗಿ ಶಾಲೆಗಳ ವ್ಯವಸ್ಥೆಗೂ ಕಡಿಮೆಯಿಲ್ಲದಂತೆ ಸೌಕರ್ಯಗಳನ್ನು ಅಳವಡಿಸಲಾಗುವುದು.
ನೆಲಮಹಡಿಯಲ್ಲಿ ನಾಲ್ಕು ಹಾಗೂ ಒಂದನೇ ಆಂತಸ್ತಿನಲ್ಲಿ ನಾಲ್ಕು ಕೊಠಡಿಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಕೊಠಡಿಗಳಲ್ಲಿ ವಿದ್ಯುತ್ ವ್ಯವಸ್ಥೆ, ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ 320 ಕೂಡುವ ಆಸನಗಳನ್ನು (ಡೆಸ್ಕ್), 10 ಲಕ್ಷ ರೂ. ವೆಚ್ಚದಲ್ಲಿ ಆರ್ಟ್ ಪೇಂಟಿಂಗ್. ಎಲ್ಲ ಕೊಠಡಿಗಳಲ್ಲೂ ಫ್ಯಾನ್ ಹಾಗೂ ಡಿಜಿಟಲ್ ಬೋರ್ಡ್ ಅಳವಡಿಸಲಾಗುವುದು. ಉತ್ತಮ ಗುಣಮಟ್ಟದ ಕಟ್ಟಡ ಹಾಗೂ ಸೌಲಭ್ಯಗಳನ್ನು ಒದಗಿಸಲಾಗುವುದು, ಇದಕ್ಕೆ ಜನಪ್ರತಿನಿಧಿಗಳ ಹಾಗೂ ಶಿಕ್ಷಣ ಇಲಾಖೆಯ ಸಂಪೂರ್ಣ ಸಹಕಾರದ ಅಗತ್ಯವಿದೆ ಎಂದರು.
ಲೋಕೇಶ್ ಸುಣಗಾರ್ ಪಬ್ಲಿಕ್ ನೆಕ್ಸ್ಟ್ ಹಾನಗಲ್
PublicNext
29/04/2026 07:34 am
LOADING...