ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್‌ಗೆ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಇದನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸಿದೆ.
ಕುಕ್ಕರ್ ಬ್ಲಾಸ್ಟ್ ಆರೋಪಿ ಭಯೋತ್ಪಾದಕ ಶಾರೀಕ್‌ಗೆ ಶಿಕ್ಷೆಯಾದ ಹಿನ್ನೆಲೆಯಲ್ಲಿ ವಿಎಚ್‌ಪಿಯಿಂದ ಗರೋಡಿ ಶ್ರೀಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಲಾಯಿತು.
ದೊಡ್ಡ ಪ್ರಮಾಣದಲ್ಲಿ ನಡೆಯಬೇಕಿದ್ದ ಅನಾಹುತವನ್ನು ಶ್ರೀ ಕ್ಷೇತ್ರದ ದೈವಿಕ ಶಕ್ತಿಯೇ ತಪ್ಪಿಸಿ ಅಂದು ಮಂಗಳೂರನ್ನು ರಕ್ಷಿಸಿ ತಪ್ಪಿತಸ್ಥನಿಗೆ ಶಿಕ್ಷೆಯಾಗುವ ಮೂಲಕ ನ್ಯಾಯವನ್ನು ಒದಗಿಸಿಕೊಟ್ಟಿದೆ.
ಈ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು ಜೊತೆಗೆ ತಪ್ಪಿತಸ್ಥನಿಗೆ ಶಿಕ್ಷೆಯ ಪ್ರಮಾಣ ಹೆಚ್ಚಾಗುವಂತೆ ದೇವರ ಸಾನಿಧ್ಯದಲ್ಲಿ ಪ್ರಾರ್ಥಿಸಲಾಯಿತು.
ಆರೋಪಿಯು ಇತಿಹಾಸ ಪ್ರಸಿದ್ಧ ಕದ್ರಿ ದೇವಸ್ಥಾನವನ್ನು ಸ್ಫೋಟಿಸಿ ನೂರಾರು ಜನರ ಹತ್ಯೆಗೆ ಸಂಚು ರೂಪಿಸಿದ್ದ. ಆದರೆ ಕಂಕನಾಡಿ ಗರೋಡಿ ಶ್ರೀಬ್ರಹ್ಮಬೈದರ್ಕಳ ಕ್ಷೇತ್ರದ ರಸ್ತೆಯ ಮುಂಭಾಗ ಕುಕ್ಕರ್ ಬಾಂಬ್ ಸಣ್ಣ ಪ್ರಮಾಣದಲ್ಲಿ ಸ್ಫೋಟಗೊಂಡು ಅವನ ಕೃತ್ಯ ವಿಫಲವಾಯಿತು. ಅವನ ಉದ್ದೇಶ ಕದ್ರಿ ದೇವಸ್ಥಾನವನ್ನು ಸ್ಫೋಟಿಸಿ ನೂರಾರು ಭಕ್ತರನ್ನು ಹತ್ಯೆ ಮಾಡುವುದಾಗಿತ್ತು.
ಇದನ್ನು ಪರಿಗಣಿಸಿ ಶಿಕ್ಷೆಯ ಪ್ರಮಾಣ ಹೆಚ್ಚಾಗಬೇಕಿತ್ತು. ಆದರೆ ಶಿಕ್ಷೆಯ ಪ್ರಮಾಣ ಕಡಿಮೆಯಾಗಿದೆ. ಶಿಕ್ಷೆಯ ಪ್ರಮಾಣ ಹೆಚ್ಚಿಸಲು ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕು ಎಂದು ತಕ್ಷಣ ರಾಷ್ಟ್ರೀಯ ತನಿಖಾ ದಳಕ್ಕೆ ಆಗ್ರಹಿಸುತ್ತೇವೆ ಎಂದು ವಿಎಚ್‌ಪಿ ಆಗ್ರಹಿಸಿತು.
PublicNext
29/04/2026 07:57 am
LOADING...