ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ಪಿಕ್ನಿಕ್ ಸಂಭ್ರಮದಲ್ಲಿ ಅಳಿದುಹೋದ ಜೀವ - ತುಂಗಭದ್ರಾ ನದಿಯಲ್ಲಿ ದುರಂತ

ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಮನಕಲಕುವ ಘಟನೆಯೊಂದು ಸಂಭವಿಸಿದೆ. ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದ ವ್ಯಕ್ತಿಯೊಬ್ಬರು ಕಾಲು ಜಾರಿ ಬಿದ್ದು ಮುಳುಗಿ ಸಾವನ್ನಪ್ಪಿದ್ದಾರೆ. ರಟ್ಟಿಹಳ್ಳಿ ತಾಲೂಕಿನ ಕಿರಗೆರೆ ಗ್ರಾಮದ ಬಳಿ ಇರುವ ತುಂಗಭದ್ರಾ ನದಿಯಲ್ಲಿ ಈ ದುರಂತ ನಡೆದಿದೆ.

ಮೃತರನ್ನು 52 ವರ್ಷದ ಅಬ್ಬಾಸ್ ನಾಸೂರ್ ಎಂದು ಗುರುತಿಸಲಾಗಿದೆ. ಅಬ್ಬಾಸ್ ಅವರು ಮೂಲತಃ ಹಿರೇಕೆರೂರು ತಾಲೂಕಿನ ಕೋಡ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.

ಅಬ್ಬಾಸ್ ಅವರು ತಮ್ಮ ಕುಟುಂಬ ಸಮೇತ ಪಿಕ್ನಿಕ್‌ಗೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ.

Edited By : Vijay Kumar
PublicNext

PublicNext

29/04/2026 08:45 am

Cinque Terre

10.8 K

Cinque Terre

0

ಸಂಬಂಧಿತ ಸುದ್ದಿ