ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಗ್ ಬಾಸ್ ರಜತ್‌ಗೆ ಕಾನೂನು ಸಂಕಷ್ಟ: ಪೆಟ್ರೋಲ್ ಬಾಂಬ್ ರೀಲ್ಸ್‌ನಿಂದ ಎಫ್‌ಐಆರ್ ಭೀತಿ!

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೆಟ್ರೋಲ್ ಬಾಂಬ್ ಸ್ಫೋಟವನ್ನು ಹೋಲುವಂತಹ ರೀಲ್ಸ್ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಕ್ಕಾಗಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿದ್ಧತೆ ನಡೆಸಲಾಗಿದೆ.

ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಈ ಎಫ್‌ಐಆರ್ ದಾಖಲಾಗಲಿದ್ದು, ಪೊಲೀಸರು ಕಾನೂನು ತಜ್ಞರ ಸಲಹೆ ಪಡೆಯುತ್ತಿದ್ದಾರೆ. ಎಫ್‌ಐಆರ್ ದಾಖಲಿಸಿದ ನಂತರ ರಜತ್‌ಗೆ ನೋಟಿಸ್ ನೀಡಿ ವಿಚಾರಣೆ ನಡೆಸಲು ಕಗ್ಗಲಿಪುರ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

Edited By : Manjunath H D
PublicNext

PublicNext

29/04/2026 11:41 am

Cinque Terre

12.77 K

Cinque Terre

1

ಸಂಬಂಧಿತ ಸುದ್ದಿ