ಕಡೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನಲ್ಲಿ ಸಬ್ ಇನ್ಸ್‌ಪೆಕ್ಟರ್ ಪತ್ನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಬೀರೂರು ಪೊಲೀಸ್ ಠಾಣೆಯ ಠಾಣಾಧಿಕಾರಿಯಾಗಿರುವ ತಿಪ್ಪೇಶ್ ಅವರ ಪತ್ನಿ ಪದ್ಮ (34) ಕಳೆದ ರಾತ್ರಿ ಮನೆಯಲ್ಲೇ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆ.
ಬೇಸಿಗೆ ರಜೆ ಇರುವುದರಿಂದ ಮಕ್ಕಳನ್ನು ಊರಿಗೆ ಕಳುಹಿಸುವಂತೆ ಪದ್ಮ ಅವರು ಪತಿಯ ಬಳಿ ಕೇಳಿದ್ದರು ಎನ್ನಲಾಗಿದ್ದು, ಈ ವಿಚಾರವಾಗಿ ದಂಪತಿಯ ನಡುವೆ ಕೌಟುಂಬಿಕ ಕಲಹ ಉಂಟಾಗಿತ್ತು ಎಂದು ತಿಳಿದುಬಂದಿದೆ.
ಪತಿಯು ಊರಿಗೆ ಕಳುಹಿಸಲು ನಿರಾಕರಿಸಿದ್ದರಿಂದ ಮನನೊಂದ ಪದ್ಮ ಅವರು ಈ ತೀವ್ರ ನಿರ್ಧಾರ ಕೈಗೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಪ್ರೀತಿಸಿ ಮದುವೆಯಾಗಿದ್ದ ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಸದ್ಯ ಶವವು ನೇಣು ಬಿಗಿದ ಸ್ಥಿತಿಯಲ್ಲೇ ಇದ್ದು, ಪದ್ಮ ಅವರ ಕುಟುಂಬಸ್ಥರ ಆಗಮನಕ್ಕಾಗಿ ಪೊಲೀಸರು ಕಾಯುತ್ತಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡುವ ಸಾಧ್ಯತೆಯಿದ್ದು, ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
PublicNext
29/04/2026 12:00 pm
LOADING...