ಮೂಡಿಗೆರೆ: ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯ 3ನೇ ತಿರುವಿನಲ್ಲಿ ಒಂಟಿ ಸಲಗವೊಂದು ಕಾಣಿಸಿಕೊಂಡಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಪ್ರವಾಸಿಗರು ಮತ್ತು ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.
ಕಾಡಾನೆಯು ರಸ್ತೆಗೆ ಇಳಿಯಲು ಸುರಕ್ಷಿತವಾದ ಜಾಗವನ್ನು ಹುಡುಕುತ್ತಾ ಎತ್ತರದ ಪ್ರದೇಶದಲ್ಲಿ ನಿಂತಿದ್ದು, ಕೆಳಕ್ಕೆ ಇಳಿಯಲು ಸಾಧ್ಯವಾಗದೆ ಅಲ್ಲಿಯೇ ಜಾಗಕ್ಕಾಗಿ ಪರದಾಡುತ್ತಿದೆ. ಆನೆಯನ್ನು ಕಂಡು ಬೆದರಿದ ಸಾರ್ವಜನಿಕರು ರಸ್ತೆಯಲ್ಲೇ ವಾಹನಗಳನ್ನು ನಿಲ್ಲಿಸಿದ್ದು, ಈ ಭಾಗದಲ್ಲಿ ಮೊಬೈಲ್ ನೆಟ್‌ವರ್ಕ್ ಇಲ್ಲದ ಕಾರಣ ಅರಣ್ಯ ಇಲಾಖೆಗೆ ಅಥವಾ ಇತರರಿಗೆ ಮಾಹಿತಿ ನೀಡಲು ಪ್ರವಾಸಿಗರು ಸಾಕಷ್ಟು ತೊಂದರೆ ಅನುಭವಿಸಿದರು.
ಚಾರ್ಮಾಡಿ ಘಾಟ್‌ನಲ್ಲಿ ಒಂಟಿ ಸಲಗ ಇರುವ ಬಗ್ಗೆ ಅರಣ್ಯ ಇಲಾಖೆಯು ಎಚ್ಚರಿಕೆ ನೀಡಿದ್ದು, ವಾಹನ ಸವಾರರು ಜಾಗರೂಕತೆಯಿಂದ ಸಂಚರಿಸುವಂತೆ ಮನವಿ ಮಾಡಿದೆ.
PublicNext
29/04/2026 01:53 pm
LOADING...