ಉಡುಪಿ: ಇತ್ತೀಚೆಗೆ ಕೊಡಗು ಜಿಲ್ಲೆಯ ಹೋಂಸ್ಟೇ ಒಂದರಲ್ಲಿ ನಡೆದ ವಿದೇಶಿ ಮಹಿಳೆಯ ಅತ್ಯಾಚಾರ ಪ್ರಕರಣ ಬಳಿಕ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರ ನಿರ್ದೇಶನದಂತೆ ಉಡುಪಿ ಜಿಲ್ಲಾ ಪೊಲೀಸರು ವ್ಯಾಪಕ ಕಾರ್ಯಾಚರಣೆ ಕೈಗೊಂಡಿದ್ದಾರೆ. ಜಿಲ್ಲೆಯಾದ್ಯಂತ ಪೊಲೀಸರು ಹೋಂಸ್ಟೇ/ರೆಸಾರ್ಟ್ ಗಳನ್ನು ಪರಿಶೀಲನೆ ಮಾಡಿದಾಗ ಸುಮಾರು 71 ಅಕ್ರಮ ಹೋಂಸ್ಟೇಗಳು ಪತ್ತೆಯಾಗಿವೆ. ಈ 71 ಅಕ್ರಮ ಹೋಂಸ್ಟೇ/ ರೆಸಾರ್ಟ್ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪ್ರವಾಸೋದ್ಯಮ ಇಲಾಖೆಗೆ ಪೊಲೀಸರು ವರದಿ ನೀಡಿದ್ದಾರೆ. ಇವುಗಳಲ್ಲಿ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ 16, ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ 15 ಮತ್ತು ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ 8 ಒಳಗೊಂಡಿದೆ. ಎಲ್ಲ ಹೋಂ ಸ್ಟೇಗಳು ಅಗತ್ಯ ಅನುಮತಿ ಮತ್ತು ನಿಯಮಗಳನ್ನು ಪಾಲಿಸಬೇಕು. ನಿಯಮಾವಳಿ ಗಾಳಿಗೆ ತೂರಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಹೇಳಿದ್ದಾರೆ.
PublicNext
29/04/2026 02:47 pm
LOADING...