ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಸಿ-ಸಿದ್ದಾಪುರ ಕ್ಷೇತ್ರದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ಶಿರಸಿ: 2026ನೇ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಿರಸಿ-ಸಿದ್ದಾಪುರ ಕ್ಷೇತ್ರದ

ಶಾಸಕ ಭೀಮಣ್ಣ ಟಿ. ನಾಯ್ಕ ಅವರು ಬುಧವಾರ ಸನ್ಮಾನಿಸಿ ಗೌರವಿಸಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಾಸಕರು ನಮ್ಮ ಕ್ಷೇತ್ರದ ವಿದ್ಯಾರ್ಥಿಗಳು ಜ್ಞಾನವಂತರಾಗಿ ಹೊರಹೊಮ್ಮಬೇಕು. ಕೇವಲ ಅಂಕಗಳಷ್ಟೇ ಅಲ್ಲದೆ, ಉತ್ತಮ ಸಂಸ್ಕಾರವನ್ನು ಅಳವಡಿಸಿಕೊಂಡು ಸಮಾಜದ ಆಸ್ತಿಯಾಗಬೇಕು. ಶಿರಸಿ ಸಿದ್ದಾಪುರ ಕ್ಷೇತ್ರದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಬೇಕಾದ ಎಲ್ಲಾ ರೀತಿಯ ಸಹಕಾರ ನೀಡಲು ನಾನು ಸದಾ ಸಿದ್ಧ ಎಂದು ಭರವಸೆ ನೀಡಿದರು

ನಂತರ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಅವರು ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇಷ್ಟೊಂದು ದೊಡ್ಡ ಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ನಂತರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಗಣ್ಯರು, ಮುಂದಿನ ಶೈಕ್ಷಣಿಕ ಹಂತದಲ್ಲಿ ಸರಿಯಾದ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುವಂತೆ ಮತ್ತು ಸ್ಪರ್ಧಾತ್ಮಕ ಜಗತ್ತಿಗೆ ಸಜ್ಜಾಗುವಂತೆ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು,ವಿದ್ಯಾರ್ಥಿಗಳ ಪೋಷಕರು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

29/04/2026 02:57 pm

Cinque Terre

3.22 K

Cinque Terre

0

ಸಂಬಂಧಿತ ಸುದ್ದಿ