ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಲಾರಿ ಬಸ್ ಭೀಕರ ರಸ್ತೆ ಅಪಘಾತದಲ್ಲಿ ಬಸ್ ಚಾಲಕ ಸಹಿತ ಆರು ಮಂದಿ ಗಂಭೀರ ಗಾಯಗೊಂಡಿದ್ದು, ಬಸ್ಸಿನಲ್ಲಿದ್ದ 20 ಕ್ಕೂ ಅಧಿಕ ಭಕ್ತ ಪ್ರಯಾಣಿಕರಿಗೆ ಗಾಯಗಳಾದ ಘಟನೆ ತ್ರಾಸಿ ಸಮೀಪದ ಮರವಂತೆ ಬೀಚ್ ನಲ್ಲಿ ನಡೆದಿದೆ.
ಬುಧವಾರ ಮಧ್ಯಾಹ್ನ ಅಪಘಾತ ನಡೆದಿದೆ. ಸರಕು ತುಂಬಿದ ಲಾರಿ ತ್ರಾಸಿ-ಮರವಂತೆ ಬೀಚಿನಲ್ಲಿ ನಿಂತಿತ್ತು ಎನ್ನಲಾಗಿದೆ. ಇದೇ ಸಂದರ್ಭ ಕೇರಳ ನೋಂದಣಿಯ ಖಾಸಗೀ ಬಸ್ ಹಿಂದಿನಿಂದ ಬರುತ್ತಿತ್ತು. ಬಲಬದಿಯಲ್ಲಿದ್ದ ಸಮುದ್ರವನ್ನು ನೋಡುತ್ತಾ ಬಂದಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಲಾರಿಯ ಹಿಂಬದಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಬಸ್ಸಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕಣ ದಾಖಲಾಗಿದೆ.
PublicNext
29/04/2026 02:58 pm
LOADING...