ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ನಗರೋತ್ಥಾನ ಯೋಜನೆ ಕಾಮಗಾರಿಗಳ ಪರಿಶೀಲನೆ 

ಚಾಮರಾಜನಗರ: ನಗರದ ನಗರಸಭೆ ವ್ಯಾಪ್ತಿಯಲ್ಲಿ ನಗರೋತ್ಥಾನ 4ನೇ ಹಂತದ ಯೋಜನೆಯಡಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಜಿಲ್ಲಾಧಿಕಾರಿ ಶ್ರೀರೂಪ ಪರಿಶೀಲಿಸಿದರು. 

ನಗರದ ವಾರ್ಡ್ ಸಂಖ್ಯೆ 19, 20 ಹಾಗೂ 29ರಲ್ಲಿ ಸುಮಾರು 118 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 1.18 ಕಿ.ಮೀ ಉದ್ದದ ಸಿಸಿ ರಸ್ತೆ ಕಾಮಗಾರಿಯನ್ನು ವೀಕ್ಷಿಸಿದರು. 292 ಮೀಟರ್ ಉದ್ದದ ಚರಂಡಿ ಅಭಿವೃದ್ಧಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು. 

ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕ ವೆಂಕಟೇಶ್, ಇಇ ರಾಮಚಂದ್ರ, ನಗರಸಭೆ ಎಇಇ ಪ್ರಕಾಶ್ ಸೇರಿದಂತೆ ಇತರರು ಇದ್ದರು.

Edited By : PublicNext Desk
Kshetra Samachara

Kshetra Samachara

29/04/2026 04:13 pm

Cinque Terre

340

Cinque Terre

0

ಸಂಬಂಧಿತ ಸುದ್ದಿ