ಶಿವಮೊಗ್ಗ : ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಹೊಳೆಹೊನ್ನೂರು ಹಾಗೂ ಕೂಡ್ಲಿಗೆರೆ ಹೋಬಳಿಯ ಗ್ರಾಮಗಳಲ್ಲಿ ಪ್ರಕೃತಿ ವಿಕೋಪದಿಂದ ಹಾನಿಯಾಗಿರುವ ಘಟನೆಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ತಕ್ಷಣ ಹೆಚ್ಚು ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆದು, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಏ.26ರಂದು ಈ ಎರಡೂ ಹೋಬಳಿ ಗ್ರಾಮಗಳಲ್ಲಿ ಹಿಂದೆಂದೂ ಕಂಡರಿಯದ ಆಲಿಕಲ್ಲು ಮಳೆ, ಬಿರುಗಾಳಿಯಿಂದ ಸುಮಾರು ಮನೆಗಳು ಹಾನಿಯಾಗಿದ್ದು, ವಾಸ ಮಾಡಲಿಕ್ಕೆ ಆಗದಂತಾಗಿದೆ. ನಿರಾಶ್ರಿತರಿಗೆ ಗಂಜಿಕೇಂದ್ರಗಳನ್ನು ತೆರೆಯಲಾಗಿದೆ. ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಮರಗಳನ್ನು ಬೆಳೆಯಲಾಗಿದ್ದು, ಒಂದು ಎಕರೆಯಲ್ಲಿರುವ ಅಡಿಕೆ ಮರಗಳಲ್ಲಿ ಶೇ.50ಕ್ಕಿಂತ ಹೆಚ್ಚು ಮರಗಳು ನೆಲಕ್ಕುರುಳಿ ರೈತರು ಆತಂಕಕ್ಕೀಡಗಿದ್ದಾರೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
Kshetra Samachara
29/04/2026 04:51 pm
LOADING...