ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಕಲೇಶಪುರ: ಹಳ್ಳಿಬೈಲು ಗ್ರಾಮಕ್ಕೆ ಲಗ್ಗೆ ಇಟ್ಟ ದೈತ್ಯ ಒಂಟಿಸಲಗ - ಗ್ರಾಮಸ್ಥರಲ್ಲಿ ಆತಂಕ

ಸಕಲೇಶಪುರ: ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ಇದೀಗ ಸಕಲೇಶಪುರ ತಾಲ್ಲೂಕಿನ ಹೆತ್ತೂರು ಹೋಬಳಿಯ ಹಳ್ಳಿಬೈಲು ಗ್ರಾಮದಲ್ಲಿ ದೈತ್ಯಾಕಾರದ ಒಂಟಿಸಲಗವೊಂದು ಕಾಣಿಸಿಕೊಂಡು ಜನರಲ್ಲಿ ತೀವ್ರ ಭೀತಿ ಮೂಡಿಸಿದೆ.

ಸುಮಾರು ಎರಡು ದೊಡ್ಡ ದಂತಗಳನ್ನು ಹೊಂದಿರುವ ಈ ಬೃಹತ್ ಕಾಡಾನೆ ಗ್ರಾಮದ ಕಾಫಿ ಮತ್ತು ಅಡಿಕೆ ತೋಟಗಳಲ್ಲಿ ಬೀಡುಬಿಟ್ಟಿದೆ. ತೋಟದ ಕೆಲಸಕ್ಕೆ ತೆರಳುತ್ತಿದ್ದ ರೈತರು ಆನೆಯನ್ನು ಕಂಡು ದಿಕ್ಕಾಪಾಲಾಗಿ ಓಡಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಕಾಡಾನೆಗಳ ಸಂಚಾರ ಹೆಚ್ಚಾಗಿದ್ದು, ಇದೀಗ ನೇರವಾಗಿ ಜನವಸತಿ ಪ್ರದೇಶದ ಸಮೀಪವೇ ಒಂಟಿಸಲಗ ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರ ನಿದ್ದೆಗೆಡಿಸಿದೆ.

Edited By : Nagaraj Tulugeri
PublicNext

PublicNext

29/04/2026 06:41 pm

Cinque Terre

7.17 K

Cinque Terre

0