ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರಹ್ಮಾವರ: ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ವಾರೀಸುದಾರರ ಪತ್ತೆಗೆ ಪೊಲೀಸರ ಮನವಿ

ಬ್ರಹ್ಮಾವರ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಬಾರಕೂರಿನಲ್ಲಿ ಸಂಭವಿಸಿದ ಅಪಘಾತವೊಂದರಲ್ಲಿ ಗಾಯಗೊಂಡು, ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟ ಮಹಿಳೆಯೊಬ್ಬರ ವಾರೀಸುದಾರರನ್ನು ಪತ್ತೆಹಚ್ಚಲು ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ವಾರೀಸುದಾರರನ್ನು ಪತ್ತೆಹಚ್ಚಲು ಬ್ರಹ್ಮಾವರ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, 62 ವರ್ಷ ಪ್ರಾಯದ ಮಹಿಳೆಯೊಬ್ಬರು ಬಾರಕೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇವರು ತಮ್ಮನ್ನು ಶಾರದಾ, ಕೆಂಚಮ್ಮ ಅಥವಾ ಲೀಲಾ ಎಂದು ಪರಿಚಯಿಸಿಕೊಂಡಿದ್ದು, ಗಾಜನೂರು, ಆಯನೂರು ಮೂಲದವರೆಂದು ಹೇಳಿಕೊಂಡಿದ್ದರು. 2026ರ ಜನವರಿ 14ರಂದು ಸಂಜೆ 5:25ರ ಸುಮಾರಿಗೆ ಬಾರಕೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಇವರು ಜೀವನ್ ಎಂಬುವವರ ಮೋಟಾರ್ ಬೈಕ್‌ಗೆ ಡಿಕ್ಕಿ ಹೊಡೆದು ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮರುದಿನ ಮೃತಪಟ್ಟರು.

ಮೃತ ಮಹಿಳೆಯು ಸುಮಾರು 5.3 ಅಡಿ ಎತ್ತರ, ಸಪುರ ಶರೀರ ಮತ್ತು ಗೋಧಿ ಮೈಬಣ್ಣ ಹೊಂದಿದ್ದಾರೆ. ಅವರ ಎಡಗೈಯಲ್ಲಿ ಕಪ್ಪು ಮಚ್ಚೆ ಇದ್ದು, ಮೂಗಿನಲ್ಲಿ ಚಿನ್ನದಂತೆ ಕಾಣುವ ಮೂಗುಬೊಟ್ಟು ಧರಿಸಿದ್ದರು. ಈ ಮಹಿಳೆಯ ಬಗ್ಗೆ ಯಾವುದೇ ಮಾಹಿತಿ ತಿಳಿದಿರುವವರು ಅಥವಾ ಅವರ ವಾರೀಸುದಾರರು ಬ್ರಹ್ಮಾವರ ಪೊಲೀಸ್ ಠಾಣೆಯ ಮೊಬೈಲ್ ಸಂಖ್ಯೆಗಳಾದ 9480805432 ಮತ್ತು 9480805453 ಅನ್ನು ಸಂಪರ್ಕಿಸುವಂತೆ ಪೊಲೀಸರು ಕೋರಿದ್ದಾರೆ.

Edited By : PublicNext Desk
Kshetra Samachara

Kshetra Samachara

29/04/2026 06:50 pm

Cinque Terre

610

Cinque Terre

0

ಸಂಬಂಧಿತ ಸುದ್ದಿ