ಬೆಂಗಳೂರಿನಲ್ಲಿ ಇಂದು ಸುರಿದ ಭಾರಿ ಮಳೆಯು ಭೀಕರ ದುರಂತಕ್ಕೆ ಕಾರಣವಾಗಿದೆ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ, ಮಕ್ಕಳು ಸೇರಿದಂತೆ ಒಟ್ಟು 7 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಕುಸಿದ ಕಾಂಪೌಂಡ್‌ನ ಅವಶೇಷಗಳ ಅಡಿಯಲ್ಲಿ ರಸ್ತೆ ಬದಿ ವ್ಯಾಪಾರಿಗಳು ಮತ್ತು ಪಾದಚಾರಿಗಳು ಸಿಲುಕಿಕೊಂಡಿದ್ದು, ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಇನ್ನೂ ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲಿಸಿದರು.
PublicNext
29/04/2026 07:53 pm
LOADING...