ಶಿರಸಿ: ವಿದ್ಯಾರ್ಥಿಗಳ ತಾಂತ್ರಿಕ ಕೌಶಲ್ಯವನ್ನು ಹೆಚ್ಚಿಸಲು ಸ್ಟೆಮ್ ಲ್ಯಾಬ್ ಸಹಾಯಕಾರಿ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು.
ಇಂದು ಸ್ಕೊಡ್‌ವೆಸ್ ಸಂಸ್ಥೆ ಹಾಗೂ ಗುಜರಾತ್‌ನ ದೇಸಾಯಿ ಫೌಂಡೇಶನ್‌ನ ಸಹಯೋಗದಲ್ಲಿ ಮಾರಿಕಾಂಬಾ ಪ್ರೌಢಶಾಲೆಯಲ್ಲಿ ಸ್ಥಾಪಿಸಲಾದ ಸ್ಟೆಮ್ ಲ್ಯಾಬ್‌ಗೆ ಭೇಟಿ ನೀಡಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಹಂತದಲ್ಲಿಯೇ ವಿದ್ಯಾರ್ಥಿಗಳಲ್ಲಿ ಇರುವ ತಾಂತ್ರಿಕ ಪ್ರತಿಭೆಗಳನ್ನು ಗುರುತಿಸಿ ಕೌಶಲ್ಯಗಳನ್ನು ಹೆಚ್ಚಿಸಲು ಸ್ಟೆಮ್ ಲ್ಯಾಬ್ ಮಾದರಿಯ ಸೌಲಭ್ಯಗಳನ್ನು ಕೆ.ಪಿ.ಎಸ್. ಶಾಲೆಗಳಲ್ಲೂ ಸಹ ಅಳವಡಿಸಲಾಗುತ್ತಿದೆ ಎಂದರು.
ಉತ್ತಮ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲು ಆಗಮಿಸಿದ್ದ ಶಿಕ್ಷಣ ಸಚಿವರು ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗಾಗಿ ಸ್ಟೆಮ್ ಲ್ಯಾಬ್‌ನಂತಹ ಕಾರ್ಯಕ್ರಮಗಳನ್ನು ಅಳವಡಿಸಿರುವುದಕ್ಕೆ ದೇಸಾಯಿ ಫೌಂಡೇಶನ್ ಮತ್ತು ಸ್ಕೊಡ್‌ವೆಸ್ ಸಂಸ್ಥೆಯನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿಶಾಸಕ ಭೀಮಣ್ಣ ನಾಯ್ಕ, ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಿ.ಆರ್.ನಾಯಕ್, ಬಿ.ಇ.ಒ. ನಾಗರಾಜ ನಾಯ್ಕ, ಸ್ಕೊಡ್‌ವೆಸ್ ಸಂಸ್ಥೆಯ ನಿರ್ದೇಶಕ ಪ್ರೊ.ಕೆ.ಎನ್. ಹೊಸಮನಿ, ಕಾರ್ಯಕ್ರಮಾಧಿಕಾರಿ ಡಾ. ನಾರಾಯಣ ಹೆಗಡೆ ಉಪಸ್ಥಿತರಿದ್ದರು.
Kshetra Samachara
29/04/2026 07:56 pm
LOADING...