ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚನ್ನರಾಯಪಟ್ಟಣ: ಹೇಮಾವತಿ ನಾಲೆಗೆ ಕಾರು ಉರುಳಿ ತಾಯಿ-ಮಗು ಸಾವು

ಚನ್ನರಾಯಪಟ್ಟಣ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೇಮಾವತಿ ನಾಲೆಗೆ ಬಿದ್ದ ಪರಿಣಾಮ, ತಾಯಿ ಹಾಗೂ ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಮಲ್ಲನಘಟ್ಟ ಗ್ರಾಮದ ಬಳಿ ನಡೆದಿದೆ.

ಬೆಂಗಳೂರಿನ ದೇವನಹಳ್ಳಿ ನಿವಾಸಿಗಳಾದ ಪ್ರಿಯಾಂಕ (30) ಮತ್ತು ಆಕೆಯ ಪುತ್ರ ವೈಭವ್ (1.5 ವರ್ಷ) ಮೃತ ದುರ್ದೈವಿಗಳು.

ಈ ಕುಟುಂಬವು ಧರ್ಮಸ್ಥಳಕ್ಕೆ ಭೇಟಿ ನೀಡಿ ಮರಳಿ ದೇವನಹಳ್ಳಿಗೆ ತೆರಳುತ್ತಿತ್ತು. ಕಾರಿನಲ್ಲಿ ಒಟ್ಟು ಆರು ಮಂದಿ ಪ್ರಯಾಣಿಸುತ್ತಿದ್ದರು. ಮಲ್ಲನಘಟ್ಟದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರು ರಸ್ತೆ ಪಕ್ಕದ ಹೇಮಾವತಿ ನಾಲೆಗೆ ಬಿದ್ದಿದೆ.

ಕಾರಿನಲ್ಲಿದ್ದ ಉಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

Edited By : Shivu K
PublicNext

PublicNext

29/04/2026 10:15 pm

Cinque Terre

11.84 K

Cinque Terre

0