ಶಿವಾಜಿನಗರ: ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಎಂಟು ಜನ ಮೃತಪಟ್ಟ ದುರಂತ ಹಿನ್ನೆಲೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ದುರ್ಘಟನೆ ಸಂಭವಿಸಿದ ಬೆನ್ನಲ್ಲೇ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿದ ಸಿಎಂ ಅವರು, ಮೊದಲೇ ನೋಡಿಕೊಳ್ಳೋದಕ್ಕೆ ಏನಾಗಿತ್ತು ನಿಮಗೆಲ್ಲ? ಅಂತಾ ಖಾರವಾಗಿ ಪ್ರಶ್ನಿಸಿದರು. ಅಷ್ಟು ಮಾತ್ರಕ್ಕೆ ಸುಮ್ಮನಾಗದ ಸಿಎಂ, ಏನು ಕ್ರಮ ಕೈಗೊಂಡಿದ್ದೀರಿ? ಮೊದಲೇ ನೋಡೋಕಾಗಲ್ವಾ ನಿಮಗೆ? ನಿಮ್ಮ ಮಧ್ಯೆ ಕೋ ಆರ್ಡಿನೇಷನ್ ಇರಲ್ವಾ? ಎಚ್ಚರವಹಿಸಿದ್ದರೆ ಈ ಅನಾಹುತವನ್ನು ತಪ್ಪಿಸಬಹುದಿತ್ತು ಅಂತಾ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೂ ಮುನ್ನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತ ಪ್ರಕರಣದಲ್ಲಿ 7 ಮಂದಿ ಮೃತಪಟ್ಟಿರುವುದನ್ನು ಅಧಿಕಾರಿಗಳು ತಿಳಿಸಿದರು. ವ್ಯಾಪಾರ ಮಾಡುತ್ತಿದ್ದವರ ಮೇಲೆ ಗೋಡೆ ಕುಸಿದ ಘಟನೆ ಬಗ್ಗೆ ಆಕ್ರೋಶಗೊಂಡ ಸಿಎಂ ಸ್ಥಳದಲ್ಲೇ ತನಿಖೆ ಮಾಡಲು ಆದೇಶ ನೀಡಿದರು. ಜೊತೆಗೆ ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದರು. ಇನ್ನು, ಘಟನೆಯಲ್ಲಿ ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವಂತೆಯೂ ವೈದ್ಯಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.
Kshetra Samachara
29/04/2026 10:31 pm
LOADING...