ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಬಿಎಸ್‌ವೈ ಅಭಿಮಾನೋತ್ಸವ ಹಿನ್ನೆಲೆ ವಿಜಯೇಂದ್ರ ಸ್ಥಳ ವೀಕ್ಷಣೆ

ಚಿತ್ರದುರ್ಗ : ಮಾಜಿ ಸಿಎಂ ಯಡಿಯೂರಪ್ಪ ಸಾರ್ಥಕ 50 ವರ್ಷಗಳ ರಾಜಕೀಯ ಜೀವನ ಪೂರೈಸಿದ ಹಿನ್ನೆಲೆ, ಅಭಿಮಾನಿಗಳು ಮೇ 9 ರಂದು ಬಿಎಸ್‌ವೈ ಅಭಿಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ನಿಯೋಜಿತ ಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ ನೀಡಿ ಸಿದ್ಧತೆಗಳ ವೀಕ್ಷಣೆ ಮಾಡಿದ್ರು.

ಚಿತ್ರದುರ್ಗ ಹೊರವಲಯದ ಮಾದಾರ ಚನ್ನಯ್ಯ ಗುರುಪೀಠದ ಬಳಿಯ ಸ್ಥಳದಲ್ಲಿ ಮೇ 9 ರಂದು ಬಿಎಸ್‌ವೈ ಅಭಿಮಾನೋತ್ಸವ ಕಾರ್ಯಕ್ರಮ ನಡೆಸಲು ಅಭಿಮಾನಿಗಳು ಹಾಗೂ ಬಿಜೆಪಿ ಮುಖಂಡರು ನಿರ್ಧರಿಸಿದ್ದು, ಸಕಲ ಸಿದ್ಧತೆಗಳು ಭರದಿಂದ‌ ನಡೆದಿವೆ. ನಿಯೋಜಿತ ಸ್ಥಳಕ್ಕೆ‌ ಬಿ.ವೈ ವಿಜಯೇಂದ್ರ ಭೇಟಿ ನೀಡಿ ಸಿದ್ಧತೆ ವೀಕ್ಷಣೆ ಮಾಡಿದ್ರು. ಊಟದ ಪೆಂಡಾಲ್, ಕಾರ್ಯಕ್ರಮ ವೇದಿಕೆ, ಜನರಿಗೆ ಆಸನ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ, ಪಾರ್ಕಿಂಗ್ ವ್ಯವಸ್ಥೆ ಪರಿಶೀಲನೆ‌ ಮಾಡಿದ್ರು. ಮಧ್ಯ ಕರ್ನಾಟಕದ ಚಿತ್ರದುರ್ಗ ಎಲ್ಲರಿಗೂ ಸಮೀಪ ಸ್ಥಳವಾದ್ದರಿಂದ ಇಲ್ಲಿಯೇ ಕಾರ್ಯಕ್ರಮ ನಡೆಸಲಾಗುತ್ತೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು, ಧೀಮಂತ ನಾಯಕನ ಅಭಿಮಾನೋತ್ಸವ ಅದ್ಧೂರಿಯಾಗಿ ನಡೆಯಲಿದೆ ಅಂದ್ರು.

Edited By : Shivu K
PublicNext

PublicNext

29/04/2026 10:46 pm

Cinque Terre

15.27 K

Cinque Terre

0

ಸಂಬಂಧಿತ ಸುದ್ದಿ