ಹಾಸನ: ಇನ್ನೇನು ಐದೇ ದಿನಗಳಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಬೇಕಿದ್ದ ಯುವಕನೋರ್ವ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ ಸಕಲೇಶಪುರ ತಾಲೂಕಿನ ಮೂಗಲಿ ಎಂಬಲ್ಲಿ ಸಂಭವಿಸಿದೆ.
ಬೇಲೂರು ತಾಲೂಕಿನ ಲಕ್ಕುಂದ ಗ್ರಾಮದ ದರ್ಬಾರ್ ಪೇಟೆ ನಿವಾಸಿ ಮನು ಎಲ್.ಎನ್. ಮೃತಪಟ್ಟ ದುರ್ದೈವಿ. ಮನು ಅವರ ಮದುವೆಯು ಮೇ 10ರ ಭಾನುವಾರ ನಿಶ್ಚಯವಾಗಿತ್ತು. ಮದುವೆಯ ಸಂಭ್ರಮದಲ್ಲಿದ್ದ ಯುವಕ, ಪ್ರೀ ವೆಡ್ಡಿಂಗ್ ಶೂಟ್‌ಗಾಗಿ ಭಾವಿ ವಧುವನ್ನು ಕರೆತರಲು ಕಾರಿನಲ್ಲಿ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸಕಲೇಶಪುರ ತಾಲೂಕಿನ ಮೂಗಲಿ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದೆ.ಅಪಘಾತದ ತೀವ್ರತೆಗೆ ಮನು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ. ಮಗನನ್ನು ಕಳೆದುಕೊಂಡ ಪೋಷಕರ ಹಾಗೂ ಭಾವಿ ಪತಿಯನ್ನು ಕಳೆದುಕೊಂಡ ವಧುವಿನ ಆಕ್ರಂದನ ಮುಗಿಲು ಮುಟ್ಟಿದೆ. ಮದುವೆಯ ಮಂತ್ರಗಳು ಮೊಳಗಬೇಕಿದ್ದ ಮನೆಯಲ್ಲಿ ಅಕಾಲಿಕ ಮರಣದ ಶೋಕ ಮಡುಗಟ್ಟಿದೆ.
PublicNext
30/04/2026 11:29 am
LOADING...