ಚಾಮರಾಜನಗರ : ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಬೈಪಾಸ್ ರಸ್ತೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಬೈಪಾಸ್ ಬಳಿ ನಡೆದ ಅಪಘಾತದಲ್ಲಿ ಚಾಲಕನ ಜೊತೆಗಿದ್ದ ಕಾರ್ತಿಕ್ ಹಾಗೂ ಷಣ್ಮುಗ ಎಂಬುವವರಿಗೆ ಗಂಭೀರವಾದ ಗಾಯಗಳಾಗಿದ್ದು, ಚಾಲಕ ಸೆಂದಿಲ್ ಸ್ಥಳದಿಂದ ಪರಾರಿಯಾಗಿದ್ದಾನೆ.
ವಿಚಾರ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
30/04/2026 12:02 pm
LOADING...