ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲಾಧಿಕಾರಿ ಕಚೇರಿ ಆವರಣದ ಮರಗಳಿಗೆ ಕೊಡಲಿ ಏಟು - ಆಕ್ರೋಶ ಬೆನ್ನಲ್ಲೇ ಸಿಬ್ಬಂದಿ ವಜಾ

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಆವರಣದಲ್ಲಿನ ಹಲವು ಹಣ್ಣಿನ ಮರಗಳಿಗೆ ಕೊಡಲಿ ಏಟು ಬಿದ್ದಿವೆ. ಜಿಲ್ಲಾಡಳಿತವೇ ಮರಗಳ ಮಾರಣಹೋಮ ನಡೆಸಿರುವುದು ಪರಿಸರ ಪ್ರೇಮಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಎ.24ರಂದು ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಯೊಬ್ಬರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿನ ಮರದಿಂದ ಮಾವಿನ ಕಾಯಿ ಕೊಯ್ಯುವಾಗ ಆಕಸ್ಮಿಕವಾಗಿ ವಿದ್ಯುತ್ ಆಘಾತಕ್ಕೆ ಒಳಗಾಗಿ ಮೃತಪಟ್ಟಿದ್ದರು. ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳನ್ನು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ಮರಗಳ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿಗಳನ್ನು ಬೇರೆಯೆಡೆ ವರ್ಗಾಯಿಸುವಂತೆ ಮನವಿ ಮಾಡಿದ್ದರು.

ಆದರೆ ಇದೀಗ ಜಿಲ್ಲಾಡಳಿತ ಆ ವಿದ್ಯುತ್ ತಂತಿಯನ್ನು ತೆರವುಗೊಳಿಸುವ ಬದಲು ಅಲ್ಲಿರುವ ಹತ್ತಾರು ಮರಗಳನ್ನೇ ಕಡಿದು ಹಾಕಿವೆ. ಹಲವು ವರ್ಷಗಳಿಂದ ಹಣ್ಣು ನೀಡುತ್ತಿದ್ದ ಮರಗಳಿಗೆ ಕೊಡಲಿ ಏಟು ಹಾಕಲಾಗಿದೆ. ವಿವಿಧ ಜಾತಿಯ ಪಕ್ಷಿಗಳಿಗೆ ಆಶ್ರಯವಾಗಿದ್ದ ಈ ಮರಗಳು ಇದೀಗ ನೆಲಕ್ಕೆ ಉರುಳಿ ಬಿದ್ದಿವೆ.

ಇಬ್ಬರು ಸಿಬ್ಬಂದಿ ವಜಾ !

ಇದೀಗ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿನ ಮರಗಳನ್ನು ಕಡಿದು ಹಾಕಿರುವ ವಿಚಾರಕ್ಕೆ ಸಂಬಂಧಿಸಿ ಜಿಲ್ಲಾ ಸಂಕೀರ್ಣದ ನಿರ್ವಹಣಾ ಸಮಿತಿಯಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಹೊರಗುತ್ತಿಗೆ ಸಿಬ್ಬಂದಿಯನ್ನು ಕರ್ತವ್ಯದಿಂದ ವಜಾಗೊಳಿಸಿ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.

Edited By : Abhishek Kamoji
Kshetra Samachara

Kshetra Samachara

30/04/2026 12:48 pm

Cinque Terre

880

Cinque Terre

0

ಸಂಬಂಧಿತ ಸುದ್ದಿ