ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ರಸ್ತೆ ಬದಿಯ ಗದ್ದೆಯಲ್ಲೇ ಕಾಡಾನೆ ಹಿಂಡು ಪ್ರತ್ಯಕ್ಷ, ಕಾಡಿಗಟ್ಟಿದ ಅರಣ್ಯ ಇಲಾಖೆ

ನಾಪೋಕ್ಲು : ಕೊಡಗು ಜಿಲ್ಲೆ ನಾಪೋಕ್ಲು ಸಮೀಪದ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆ ಹಾವಳಿ ಮುಂದುವರೆದಿದ್ದು, ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡು ಕಾಫಿ,ಬಾಳೆ,ಅಡಿಕೆ,ಮತ್ತಿತರ ಗಿಡಗಳನ್ನು ತುಳಿದು ಹಾನಿಪಡಿಸಿದೆ.

ನಾಪೋಕ್ಲು, ವಿರಾಜಪೇಟೆ ಮುಖ್ಯ ರಸ್ತೆಯ ಬೊವ್ವೇರಿಯಂಡ ರಮೇಶ್ ರವರ ಗದ್ದೆಯಲ್ಲಿ ಕಾಣಿಸಿಕೊಂಡ 6 ಕಾಡಾನೆಗಳ ಹಿಂಡನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಕರಡ ಕೀಮಲೆ ಕಾಡು ಮೂಲಕ ಕಾಡಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಗ್ರಾಮಸ್ಥರಾದ ಬೊವ್ವೇರಿಯಂಡ ಮೋಹನ್ ಅವರು ಮಾಹಿತಿ ನೀಡಿ ನಮ್ಮ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು ಬೆಳಿಗ್ಗೆ ಹಾಗೂ ಮಧ್ಯಾಹ್ನ ಸಮಯದಲ್ಲಿ ಮುಖ್ಯ ರಸ್ತೆಯ ಮೂಲಕವೇ ಕಾಡಾನೆಗಳು ಸಂಚರಿಸುತ್ತಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಕಾಡಾನೆಯನ್ನು ಸೆರೆ ಹಿಡಿದು ಬೇರೆಡೆ ಸ್ಥಳಾಂತರಿಸಬೇಕು, ಆನೆಗಳನ್ನು ಕಾಡಿಗಟ್ಟಿ ಯಾವುದೇ ಪ್ರಯೋಜನವಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿಗಳು ಆನೆಗಳನ್ನು ಕಾಡಿಗಟ್ಟಿ ಹಿಂತಿರುಗುವ ಮುನ್ನ ಕಾಡಾನೆಗಳು ಮರಳಿ ತೋಟಕ್ಕೆ ಲಗ್ಗೆ ಇಡುತ್ತಿದೆ. ಇದರಿಂದ ಯಾವುದೇ ಪ್ರಯೋಜನವಿಲ್ಲ ಎಂದರು.

ಆರ್ ಎಫ್ಓ ಶಿವರಾಂ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿಆರ್ ಎಫ್ಒ ಶ್ರೀನಿವಾಸ್,ಇಟಿಎಫ್ ಡಿ ಆರ್ ಎಫ್ಒ ಪ್ರಶಾಂತ್ ಹಾಗೂ ತಂಡ, ಚೆಯ್ಯಂಡಾಣೆ ಹಾಗೂ ಹೆಗ್ಗಳ ಕ್ಯಾಂಪ್ ಸಿಬ್ಬಂದಿಗಳು ಪಾಲ್ಗೊಂಡಿದರು.

Edited By :
PublicNext

PublicNext

30/04/2026 01:46 pm

Cinque Terre

7.24 K

Cinque Terre

0