ಚಿತ್ರದುರ್ಗ: ಅನೈತಿಕ ಸಂಬಂಧ ಹಿನ್ನೆಲೆ ಪತ್ನಿಯ ಮೇಲೆ ಮಚ್ಚಿನಿಂದ ಪಾಪಿ ಪತಿ ಮನ ಬಂದಂತೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಮಚ್ಚಿನೇಟಿಗೆ ಪತ್ನಿ ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಸಾವು -ಬದುಕಿನ ನಡುವೆ ಪತ್ನಿ ನರಳುತ್ತಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಚನ್ನಮ್ಮನಹಳ್ಳಿ ತಾಂಡದಲ್ಲಿ ಘಟನೆ ಜರುಗಿದೆ. ಘಟನೆಯಲ್ಲಿ ಲಕ್ಷ್ಮಿ (35) ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾಳೆ. ಆಕೆಯ ಪತಿ ತಿಪ್ಪೇಸ್ವಾಮಿ ಎಂಬಾತನಿಂದ ಕೃತ್ಯ ನಡೆದಿದೆ. ಕಳೆದ ಮೂರು ತಿಂಗಳಿಂದ ಈತನ ಜೊತೆ ಜಗಳವಾಡಿಕೊಂಡು ತವರು ಮನೆಗೆ ಬಂದು ನೆಲೆಸಿದ್ದಳು.
ಪತ್ನಿ ಲಕ್ಷ್ಮಿ ಮೇಲೆ ಅನೈತಿಕ ಸಂಬಂಧ ಇದೆ ಎಂದು ಅನುಮಾನ ಪಟ್ಟಿದ್ದ. ಇದೇ ದ್ವೇಷಕ್ಕೆ ಅತ್ತೆ ಮನೆಗೆ ಬಂದು ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಗಾಯಾಳು ಲಕ್ಷ್ಮಿ ಸ್ಥಿತಿ ಗಂಭೀರವಾಗಿದ್ದು, ದಾವಣಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರೂ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ
PublicNext
30/04/2026 02:20 pm
LOADING...