ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ,ಜನಾಂದೋಲನ ನಡಿಗೆ..! ಕೆಲ ಹೊತ್ತು ಬಿಗುವಿನ ವಾತಾವರಣ ಸೃಷ್ಟಿ..

ಮಂಗಳೂರು: ಬೆಂಗಳೂರು- ಮಂಗಳೂರು ರಾ.ಹೆ.ಯ ಬ್ರಹ್ಮರಕೂಟ್ಲುವಿನಲ್ಲಿ ಕಳೆದ 23 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಮಂಗಳವಾರ ಸಂಜೆ “ಜನಾಂದೋಲನ ನಡಿಗೆ” ನಡೆಯಿತು.

ಬಿ.ಸಿ. ರೋಡ್ ನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ನಡಿಗೆಗೆ ಚಾಲನೆ ನೀಡಲಾಯಿತು. ಬ್ರಹ್ಮರಕೂಟ್ಲು ಟೋಲ್‌ಗೇಟ್‌ ಸಮೀಪ ನಡಿಗೆ ಸಂಪನ್ನಗೊಂಡಿತು. ಬಳಿಕ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮಾತನಾಡಿ, ಅವೈಜ್ಞಾನಿಕ, ನಿಯಮ ಬಾಹಿರವಾಗಿ ಕಾರ್ಯಾಚರಿಸುತ್ತಿರುವ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವುಗೊಳಿಸುವ ನಿಟ್ಟಿನಲ್ಲಿ ತಾರ್ಕಿಕ ಅಂತ್ಯದವರೆಗೂ ಹೋರಾಟ ನಡೆಯಲಿದೆ ಎಂದು ಎಚ್ಚರಿಕೆ ನೀಡಿದರು.

ಇನ್ನು ಪ್ರತಿಭಟನಾ ಮೆರವಣಿಗೆಗಳಲ್ಲಿ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು. ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿ ಟೋಲ್ ಸಿಬ್ಬಂದಿ ಜೊತೆಗೆ ವಾಗ್ವಾದ ನಡೆಸಿದರು. ಈ ಮಧ್ಯೆ ಪೊಲೀಸರು ಮಧ್ಯೆ ಪ್ರವೇಶಿಸಿ ಪ್ರತಿಭಟನಾನಿರತರನ್ನು ತೆರವುಗೊಳಿಸಿದರು.

Edited By :
PublicNext

PublicNext

30/04/2026 02:27 pm

Cinque Terre

6.56 K

Cinque Terre

0

ಸಂಬಂಧಿತ ಸುದ್ದಿ