ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ: ಗೂಳಿಪುರದಲ್ಲಿ ಚಿರತೆ ಆರ್ಭಟ: ಕೊಟ್ಟಿಗೆಯಲ್ಲಿದ್ದ ಹಸು ಬಲಿ

ಚಾಮರಾಜನಗರ: ತಾಲ್ಲೂಕಿನ ಗೂಳಿಪುರ ಗ್ರಾಮದಲ್ಲಿ ಚಿರತೆ ದಾಳಿಯಿಂದ ಹಸು ಮೃತಪಟ್ಟ ಘಟನೆ ನಡೆದಿದೆ.

ಚಾಮರಾಜನಗರ ತಾಲ್ಲೂಕಿನ ಗೂಳಿಪುರ ಗ್ರಾಮದ ಸೋಮಣ್ಣ ಅವರಿಗೆ ಸೇರಿದ ಹಸುವನ್ನು ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ವೇಳೆ ಚಿರತೆ ದಾಳಿ ನಡೆಸಿ ಕೊಂದಿದೆ.

ಘಟನೆ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚಿರತೆ ದಾಳಿಯಿಂದ ಹಸು ಸಾವನ್ನಪ್ಪಿದ್ದರಿಂದ ಗ್ರಾಮದಲ್ಲಿ ಆತಂಕ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ ಬೆಳವಣಿಗೆಗಳ ಮೇಲೆ ನಿಗಾ ವಹಿಸಲಾಗುತ್ತಿದೆ.ಚಿರತೆ ಸೆರೆಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Edited By : Abhishek Kamoji
Kshetra Samachara

Kshetra Samachara

30/04/2026 03:22 pm

Cinque Terre

120

Cinque Terre

0

ಸಂಬಂಧಿತ ಸುದ್ದಿ