ಹುಬ್ಬಳ್ಳಿ: ದಿನದಿಂದ ದಿನಕ್ಕೆ ತಾಪಮಾನ ತೀವ್ರ ಹೆಚ್ಚಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹುಬ್ಬಳ್ಳಿಯ ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ 14 ಬೆಡ್‌ಗಳ ಸುಸಜ್ಜಿತ, ಹವಾನಿಯಂತ್ರಿತ ತೆರೆಯಲಾಗಿದೆ.
ಹುಬ್ಬಳ್ಳಿ ಧಾರವಾಡದಲ್ಲಿ ಸೆಕೆಯ ಜೊತೆಗೆ ಬೀಸುತ್ತಿರುವ ಬಿಸಿ ಗಾಳಿಯು ಮಕ್ಕಳು ಮತ್ತು ವೃದ್ಧರನ್ನು ಹೈರಾಣಾಗಿಸಿದೆ. ಅದರಲ್ಲೂ ಮಕ್ಕಳಲ್ಲಿ ತೀವ್ರ ವಾಂತಿ-ಬೇಧಿ, ಹೃದಯ ಹಾಗೂ ಕಿಡ್ನಿ ಸಂಬಂಧಿತ ಸಮಸ್ಯೆಗಳು ಉಲ್ಬಣಗೊಳ್ಳುತ್ತಿವೆ. ಈ ಸಂಬಂಧ ಉತ್ತರ ಕರ್ನಾಟಕದ ಸಂಜೀವಿನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆಯಲಾಗಿದೆ. ಬೇಸಿಗೆಯ ಜೊತೆಗೆ ಆಗಾಗ ಸುರಿಯುತ್ತಿರುವ ಮಳೆಯೂ ಕೂಡ ರೋಗ ಉಲ್ಬಣಗೊಳ್ಳಲು ಕಾರಣವಾಗುತ್ತಿದೆ. ಎಲ್ ಆ್ಯಂಡ್ ಟಿ ಸಂಸ್ಥೆಯು ಪೂರೈಸುತ್ತಿರುವ ಕುಡಿಯುವ ನೀರೂ ಕೂಡ ಕಲುಷಿತಗೊಂಡಿದ್ದು, ರೋಗ ನಿರೋಧಕ ಶಕ್ತಿ ಇಲ್ಲದವರು ಬಾಧೆ ಪಡುವಂತಾಗಿದೆ. ನಗರದ ಕೆಎಂಸಿ ಆರ್‌ಐ ಆಸ್ಪತ್ರೆಯಲ್ಲಿ ಸ್ಥಾಪಿಸಲಾದ 14 ಬೆಡ್ ಗಳಿಗೆ ಅಗತ್ಯ ಸೌಲಭ್ಯ ನೀಡಲಾಗಿದೆ.
ಕಳೆದ ಹಲವು ದಶಕಗಳ ಜಿಲ್ಲೆಯ ತಾಪಮಾನವನ್ನು ಗಮನಿಸಿದಾಗ 32-33 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿತ್ತು. ಈ ಬಾರಿ ತಾಪಮಾನ 37-38 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿದೆ. ಈ ರೀತಿಯ ತಾಪಮಾನದಿಂದ ಬಿಸಿಲಿನಲ್ಲಿ ಹೆಚ್ಚು ಓಡಾಡುತ್ತಿರುವವರಿಗೆ ತಲೆ ನೋವು, ಸುಸ್ತು, ನಿಶ್ಯಕ್ತಿ, ಚರ್ಮ ತುರಿಕೆ, ಜ್ವರ ದಿನದಿಂದ ದಿನಕ್ಕೆ ತಾಪಮಾನ ತೀವ್ರ ಹೆಚ್ಚಾಗುತ್ತಿದೆ. ಆದ ಕಾರಣ ಎಲ್ಲರೂ ಆದಷ್ಟು ಬಿಸಿಲಿನಿಂದ ದೂರ ಇರಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.
ಈರಣ್ಣ ವಾಲಿಕಾರ, ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
30/04/2026 04:19 pm
LOADING...