ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಪ್ಪಿನಂಗಡಿ ಬಳಿ ಭೀಕರ ಅಪಘಾತ : ಕಾಲೇಜು ವಿದ್ಯಾರ್ಥಿ ಕಾರ್ತಿಕ್ ಸಾವು, ಸಹಪಾಠಿ ಗಂಭೀರ

ಉಪ್ಪಿನಂಗಡಿ: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟು, ಸವಾರ ಗಾಯಗೊಂಡ ಘಟನೆ ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ನಡೆದಿದೆ.

ಮೃತರನ್ನು ಉಪ್ಪಿನಂಗಡಿಯ ಶಿವಕುಮಾರ್ ಎಂಬವರ ಪುತ್ರ ಕಾರ್ತಿಕ್ (23) ಎಂದು ಗುರುತಿಸಲಾಗಿದೆ. ಹಿರೆಬಂಡಾಡಿ ಗ್ರಾಮದ ನಿವಾಸಿ ನೇಹಾ ಗಂಭೀರ ಗಾಯಗೊಂಡಿದ್ದಾರೆ. ಇವರು ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಾಗಿದ್ದರು.

ಇವರು ಮದುವೆ ಕಾರ್ಯಕ್ರಮವೊಂದಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳಿ, ಮರಳುವ ವೇಳೆ ಲಾರಿಯೊಂದು ಢಿಕ್ಕಿ ಹೊಡೆದಿದೆ. ಪರಿಣಾಮ ದ್ವಿಚಕ್ರ ವಾಹನ ಸವಾರ ರಸ್ತೆಗೆ ಎಸೆಯುವ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನೇಹಾ ಗಂಭೀರ ಗಾಯಗೊಂಡಿದ್ದು. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ.

Edited By : PublicNext Desk
Kshetra Samachara

Kshetra Samachara

30/04/2026 04:28 pm

Cinque Terre

328

Cinque Terre

0

ಸಂಬಂಧಿತ ಸುದ್ದಿ