ಗಂಗಾವತಿ: ಬಿಜೆಪಿ ಮುಖಂಡ ವೆಂಕಟೇಶ ಕುರುಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ ಮಹತ್ವದ ತೀರ್ಪು ಪ್ರಕಟಿಸಿದೆ.
2025ರಲ್ಲಿ ಕೊಪ್ಪಳ ರಸ್ತೆಯಲ್ಲಿ ನಡೆದ ಬಿಜೆಪಿ ಮುಖಂಡ ವೆಂಕಟೇಶ ಕುರುಬರ ಹತ್ಯೆ ಪ್ರಕರಣದಲ್ಲಿ ಆರು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯವು ಆದೇಶ ಹೊರಡಿಸಿದೆ. ಈ ತೀರ್ಪು ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿದೆ. ನ್ಯಾಯಾಧೀಶ ಸದಾನಂದಪ್ಪ ನಾಯ್ಕ ಅವರು ಈ ತೀರ್ಪನ್ನು ಪ್ರಕಟಿಸಿದ್ದು, ಆರೋಪಿಗಳಾದ ರವಿ, ವಿಜಯ, ಧನರಾಜ್, ಭರತ್, ಸಲೀಂ ಮತ್ತು ಗಂಗಾಧರ ಗೌಳಿ ಅವರಿಗೆ ಮರಣದಂಡನೆ ವಿಧಿಸಿದ್ದಾರೆ. ಈ ಮೂಲಕ ಸಮಾಜದಲ್ಲಿ ಇಂತಹ ಕೃತ್ಯಗಳಿಗೆ ಕಠಿಣ ಸಂದೇಶ ರವಾನಿಸಿದ್ದಾರೆ.
ಪ್ರಕರಣದ ಹಿನ್ನೆಲೆ: 2025ರಲ್ಲಿ ಗಂಗಾವತಿಯ ಕೊಪ್ಪಳ ರಸ್ತೆಯಲ್ಲಿ ಬಿಜೆಪಿ ಮುಖಂಡ ವೆಂಕಟೇಶ ಕುರುಬರ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹತ್ಯೆ ಮಾಡಿದ್ದರು. ಈ ಘಟನೆ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿತ್ತು ಮತ್ತು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.
ಈ ಕುರಿತು ನ್ಯಾಯಾಲಯದಲ್ಲಿ ಸುದೀರ್ಘ ವಿಚಾರಣೆ ನಡೆಯಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 83 ಸಾಕ್ಷಿಗಳ ವಿಚಾರಣೆ ನಡೆಸಲಾಗಿದ್ದು, ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ನಾಗಲಕ್ಷ್ಮೀ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.
PublicNext
30/04/2026 04:36 pm
LOADING...