ಬೆಂಗಳೂರು: ಪೌತಿ ಖಾತೆ ವರ್ಗಾವಣೆ ಸಂಬಂಧ 10 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೇಗೂರು ನಾಡಕಚೇರಿಯ ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ್, 2 ಲಕ್ಷ ರೂಪಾಯಿ ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಹೌದು ಮಂಗಮ್ಮನಪಾಳ್ಯದ ಶ್ರೀ ಚೇತನ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಈ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಲೋಕಾಯುಕ್ತ ಎಸ್ ಪಿ ಶಿವಪ್ರಕಾಶ್ ದೇವರಾಜ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ಯಶಸ್ವಿಯಾಗಿ ನಡೆದಿದೆ.
PublicNext
30/04/2026 05:00 pm
LOADING...