ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮೌಲಾನಾ ಆಜಾದ್ ಶಾಲೆಗಳ ಐತಿಹಾಸಿಕ ಸಾಧನೆ, ಶೇ.90 ರಷ್ಟು ತೇರ್ಗಡೆ, ಕಳೆದ 3 ವರ್ಷಗಳಲ್ಲಿ ಅಪ್ರತಿಮ ಪ್ರಗತಿ

ಬೆಂಗಳೂರು: ಕರ್ನಾಟಕ ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಲೆಗಳು ಈ ಬಾರಿ ಅಭೂತಪೂರ್ವ ಯಶಸ್ಸನ್ನು ಸಾಧಿಸಿವೆ. ಅಲ್ಪಸಂಖ್ಯಾತರ ನಿರ್ದೇಶನಾಲಯದ 84 ವಸತಿ ಶಾಲೆಗಳಲ್ಲಿ ಪರೀಕ್ಷೆ ಬರೆದ 3,462 ವಿದ್ಯಾರ್ಥಿಗಳ ಪೈಕಿ 3,395 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 98.06 ರಷ್ಟು ಅತ್ಯುತ್ತಮ ಫಲಿತಾಂಶ ದಾಖಲಾಗಿವೆ. ಕಳೆದ ವರ್ಷ ಇದೇ ಶಾಲೆಗಳ ಫಲಿತಾಂಶ ಶೇ. 81 ರಷ್ಟಿತ್ತು ಎಂಬುದು ಗಮನಾರ್ಹ. ಇದೇ ವೇಳೆ, 198 ಮೌಲಾನಾ ಆಜಾದ್ ಮಾದರಿ ಶಾಲೆಗಳು ಕೂಡ ಶೇ. 90.14 ರಷ್ಟು ಫಲಿತಾಂಶ ಪಡೆದು ದಾಖಲೆ ನಿರ್ಮಿಸಿವೆ.

ಕಳೆದ ಮೂರು ವರ್ಷಗಳಲ್ಲಿ ಈ ಶಾಲೆಗಳಲ್ಲಿ ಮೂಲಸೌಕರ್ಯ ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ನೀಡಿದ ಆದ್ಯತೆಯಿಂದಾಗಿ ಈ ದೊಡ್ಡ ಬದಲಾವಣೆ ಸಾಧ್ಯವಾಗಿದೆ. 2024ರಲ್ಲಿ ಮೌಲಾನಾ ಆಜಾದ್ ಶಾಲೆಗಳ ಫಲಿತಾಂಶ ಕೇವಲ ಶೇ. 51 ರಷ್ಟಿತ್ತು, ಆದರೆ ಕೇವಲ ಎರಡು ವರ್ಷಗಳಲ್ಲಿ ಇದು ಶೇ. 90 ಕ್ಕೆ ಏರಿಕೆಯಾಗಿರುವುದು ದೊಡ್ಡ ಸಾಧನೆಯಾಗಿದೆ. ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದ್ದು, ಮುಂದಿನ ವರ್ಷ ಈ ಎಲ್ಲಾ ಶಾಲೆಗಳಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸುವ ಗುರಿಯನ್ನು ಹೊಂದಲಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Edited By :
PublicNext

PublicNext

30/04/2026 05:01 pm

Cinque Terre

18.28 K

Cinque Terre

0

ಸಂಬಂಧಿತ ಸುದ್ದಿ