ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣವನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೇನೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ವಿಮಾನ ನಿಲ್ದಾಣವನ್ನು ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾಗೆ ಹಸ್ತಾಂತರಿಸುವ ಪ್ರಕ್ರಿಯೆ ಸಂಬಂಧ ಹಿರಿಯ ಐಎಎಸ್ ಅಧಿಕಾರಿ ವಿಶಾಲ್ ಅವರನ್ನು ರಾಜ್ಯ ಸರ್ಕಾರ ಚರ್ಚೆಗೆ ದೆಹಲಿಗೆ ಕಳುಹಿಸಿತ್ತು.ಚರ್ಚೆ ವೇಳೆ ಎರಡು ಪ್ರಮುಖ ವಿಚಾರಗಳನ್ನು ರಾಜ್ಯ ಸರ್ಕಾರ ಪ್ರಸ್ತಾಪ ಮಾಡಿದೆ. ವಿಮಾನ ನಿಲ್ದಾಣಕ್ಕೆ ಈವರೆಗೂ ಆಗಿರುವ ಖರ್ಚು ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸುತ್ತದೆಯೆ ಎಂದು ಕೇಳಿದ್ದಾರೆ. ವಿಮಾನ ನಿಲ್ದಾಣವನ್ನು ಖಾಸಗಿ ನಿರ್ವಹಣೆಗೆ ವಹಿಸಬಹುದೆ ಎಂದು ಚರ್ಚಿಸಿದ್ದಾರೆ ಎಂದು ಮಾಹಿತಿ ನೀಡಿದರು.
ರಾಜ್ಯ ಸರ್ಕಾರದ ವತಿಯಿಂದ ನೀಡಲಾಗುತ್ತಿದ್ದ ವಯಬಿಲಿಟಿ ಗ್ಯಾಪ್ ಫಂಡಿಂಗ್ ಯೋಜನೆ ಜುಲೈ 2025ಕ್ಕೆ ಕೊನೆಗೊಂಡಿದೆ. ಇದನ್ನು ಮುಂದುವರೆಸುವ ಕುರಿತು ರಾಜ್ಯ ಸರ್ಕಾರ ಪತ್ರ ನೀಡಲು ವಿಳಂಬ ಮಾಡುತ್ತಿದೆ. ಈ ಸಂಬಂಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರಾಜ್ಯದ ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅವರೊಂದಿಗೆ ಮಾತನಾಡಿದ್ದಾರೆ.
ಆದರೆ ಈತನಕ ಪತ್ರ ನೀಡಿಲ್ಲ. ಬೀದರ್ ವಿಮಾನ ನಿಲ್ದಾಣಕ್ಕೆ ವಿಜಿಎಫ್ ಪತ್ರ ನೀಡಲಾಗಿದೆ ಎಂದರು.ಇಂಡಿಗೋ ವಿಮಾನ ಸೇವೆ ಸ್ಥಗಿತ ತಾತ್ಕಾಲಿಕವಾದದ್ದು. ಈ ಸಂಬಂಧ ರಾಜ್ಯದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರೊಂದಿಗೆ ಮಾತುಕತೆ ನಡೆಸಿದೆ. ಅವರು ಕೂಡ ವಿಮಾನ ಸೇವೆಗಳ ಪುನಾರಂಭಕ್ಕೆ ಪರ್ಯಾಯ ಮಾರ್ಗ ಹುಡುಕುವ ಭರವಸೆ ನೀಡಿದ್ದಾರೆ ಎಂದರು.
ನಮ್ಮ ವಿಮಾನ ನಿಲ್ದಾಣ ಮಧ್ಯ ಕರ್ನಾಟಕದ ಅತ್ಯಂತ ಪ್ರಮುಖವಾದದ್ದಾಗಿದೆ. ಈಚೆಗೆ ಗಾಂಧಿ ಬಜಾರ್‌ನ ಯುವತಿಯೊಬ್ಬರನ್ನು ತುರ್ತು ಚಿಕಿತ್ಸೆಗೆ ಮುಂಬೈಗೆ ಕರೆದೊಯ್ಯಬೇಕಿತ್ತು. ಶಿವಮೊಗ್ಗ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಏರ್‌ಲಿಫ್ಟ್ ಮಾಡಲಾಯಿತು. ಇದೇ ರೀತಿ ಹಲವು ಕಾರಣಕ್ಕೆ ಈ ವಿಮಾನ ನಿಲ್ದಾಣ ಪ್ರಾಮುಖ್ಯ ಪಡೆದುಕೊಂಡಿದೆ ಎಂದರು.
Kshetra Samachara
30/04/2026 05:22 pm
LOADING...