ಬೆಂಗಳೂರು: ಬೆಂಗಳೂರು ನಗರದಲ್ಲಿ ನಿನ್ನೆ ಆಲಿಕಲ್ಲು ಸಮೇತ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದು ಮೃತಪಟ್ಟ 7 ಜನರ ಕುಟುಂಬದ ಸದಸ್ಯರಿಗೆ ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವತಿಯಿಂದ ಪರಿಹಾರದ ಚೆಕ್ ವಿತರಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸೂಚನೆಯಂತೆ ಇಂದು ನಗರದ ಎಂ. ಜಿ. ರಸ್ತೆಯಲ್ಲಿರುವ ಪಿ. ಯು. ಬಿ. ಕಟ್ಟಡದ 10ನೇ ಮಹಡಿಯಲ್ಲಿರುವ ಕೇಂದ್ರ ನಗರ ಪಾಲಿಕೆ ಆಯುಕ್ತರ ಕಛೇರಿ ಸಭಾಂಗಣದಲ್ಲಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಹರ್ಷದ್ 5.00 ಲಕ್ಷಗಳ ಮೊತ್ತದ ಚೆಕ್‌ನು ಮೃತರ ಕುಟುಂಬದವರಿಗೆ ವಿತರಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಡಾ: ಕೆ. ಹರೀಶ್ ಕುಮಾರ್ ಹಾಗೂ ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್ ಉಪಸ್ಥಿತರಿದ್ದರು.
ಮೃತರ ಕುಟುಂಬದವರಿಗೆ ಮಾನ್ಯ ಶಿವಾಜಿನಗರ ಶಾಸಕ ಶ್ರೀ ರಿಜ್ವಾನ್ ಹರ್ಷದ್ ಹಾಗೂ ಮಾನ್ಯ ಆಯುಕ್ತರಾದ ಹರೀಶ್ ಕುಮಾರ್ ಸಾಂತ್ವನ ಹೇಳಿದ್ದಾರೆ.
PublicNext
30/04/2026 05:56 pm
LOADING...