ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ವಿದ್ಯಾಗಿರಿ ಸಿಪಿಐ ಅಮಾನತ್ತು

ಧಾರವಾಡ: ಕಳೆದ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಆದಿತ್ಯಾ ಮ್ಯಾಗೇರಿ ವಿಷಯಕ್ಕೆ ಸಂಬಂಧಿಸಿದಂತೆ ಧಾರವಾಡ ವಿದ್ಯಾಗಿರಿ ಠಾಣೆಯ ಸಿಪಿಐ ರಫೀಕ್ ತಹಶೀಲ್ದಾರ ಅವರನ್ನು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.

ಆದಿತ್ಯಾ ಮ್ಯಾಗೇರಿ ಎಂಬ ವಿದ್ಯಾರ್ಥಿಯನ್ನು ವಿದ್ಯಾಗಿರಿ ಠಾಣೆ ಪೊಲೀಸರು ಗಾಂಜಾ ಪ್ರಕರಣದಡಿ ವಶಕ್ಕೆ ಪಡೆದುಕೊಂಡು ಹೋಗಿದ್ದರು. ಆತ ಗಾಂಜಾ ಸೇವಿಸದೇ ಇದ್ದರೂ ಆತನ ಬಳಿ ಹಣಕ್ಕಾಗಿ ಕಿರುಕುಳ ನೀಡಿದ್ದರು. ಈ ಹಿನ್ನೆಲೆ ನೊಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಮೂವರು ಪೊಲೀಸ್ ಕಾನ್‌ಸ್ಟೇಬಲ್‌ಗಳನ್ನು ಪೊಲೀಸ್ ಆಯುಕ್ತರು ಅಮಾನತ್ತು ಮಾಡಿದ್ದರು.

ಆದರೆ, ಈ ವಿಷಯದಲ್ಲಿ ಇನ್‌ಸ್ಪೆಕ್ಟರ್‌ ಮೇಲೂ ಕ್ರಮ ಆಗಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಒತ್ತಾಯಕ್ಕೆ ಮಣಿದ ಪೊಲೀಸ್ ಆಯುಕ್ತರು ಇದೀಗ ಇನ್‌ಸ್ಪೆಕ್ಟರ್‌ ತಹಶೀಲ್ದಾರ ಅವರನ್ನು ಅಮಾನತ್ತುಗೊಳಿಸಿದ್ದಾರೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

30/04/2026 06:22 pm

Cinque Terre

11.62 K

Cinque Terre

5

ಸಂಬಂಧಿತ ಸುದ್ದಿ