ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು ಪ್ರಕರಣ ಪ್ರಕರಣ ದಾಖಲಿಸಿ ತನಿಖೆಗೆ ಚುರುಕುಗೊಳಿಸಿದ ಖಾಕಿ

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಸಮೀಪ ನಡೆದ ದುರ್ಘಟನೆಯಲ್ಲಿ ಏಳು ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೊಲೀಸರು, ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ಬೀದಿಬದಿ ವ್ಯಾಪಾರಿ ಮೊಹಮ್ಮದ್ ಅತೀಫ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ತನಿಖೆಯ ಭಾಗವಾಗಿ, ಪೊಲೀಸರು ಈಗಾಗಲೇ ಘಟನೆಯಲ್ಲಿ ಗಾಯಗೊಂಡವರು, ಮೃತರ ಕುಟುಂಬಸ್ಥರು ಹಾಗೂ ಘಟನೆ ನಡೆದ ಸ್ಥಳದ ಸಮೀಪದ ವ್ಯಾಪಾರಸ್ಥರು ಮತ್ತು ಅಂಗಡಿಯವರಿಂದ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಇಂದು ಬೆಳಗ್ಗೆ ಘಟನಾ ಸ್ಥಳದಲ್ಲಿ ಮಹಜರು ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ತನಿಖೆಯ ಮುಂದಿನ ಹಂತದಲ್ಲಿ, ಸಂಬಂಧಪಟ್ಟ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ನಿರ್ಲಕ್ಷ್ಯದ ಹಿನ್ನೆಲೆಯಲ್ಲಿ ಜಿಬಿಎ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ತನಿಖೆ ಪೂರ್ಣಗೊಂಡ ನಂತರ, ಚಾರ್ಜ್‌ಶೀಟ್‌ನಲ್ಲಿ ಆರೋಪಿಗಳ ಹೆಸರನ್ನು ಉಲ್ಲೇಖಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

30/04/2026 06:38 pm

Cinque Terre

110

Cinque Terre

0

ಸಂಬಂಧಿತ ಸುದ್ದಿ