ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ ಫಲಿತಾಂಶ ಪ್ರಕಟಣೆ ಹಾಗೂ ಅಂಕಪಟ್ಟಿ ವಿತರಣೆಯಲ್ಲಿನ ವಿಳಂಬ ನೀತಿಯನ್ನು ವಿರೋಧಿಸಿ ಎನ್‌ಎಸ್‌ಯುಐ ಹಮ್ಮಿಕೊಂಡಿದ್ದ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ. ಪ್ರತಿಭಟನಾಕಾರರು ಕುಲಪತಿಗಳ ಕಚೇರಿಯ ಮೇಲೆ ದಾಳಿ ನಡೆಸಿ, ಕಪ್ಪುಮಸಿ ಬಳಿದ ಘಟನೆಗೆ ಸಂಬಂಧಿಸಿದಂತೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 40 ಕ್ಕೂ ಹೆಚ್ಚು ಮಂದಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.
ವಿಶ್ವವಿದ್ಯಾಲಯದ ಎಸ್ಟೇಟ್ ವಿಭಾಗದ ಸಹಾಯಕ ಕುಲಸಚಿವ ಟಿ. ನಾಗರಾಜ್ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಕ್ರಮ ಸಂಖ್ಯೆ 93/2026ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯಕುಮಾರ್ ಸೇರಿದಂತೆ 15 ಪ್ರಮುಖ ನಾಯಕರು ಹಾಗೂ ಇತರ 30ಕ್ಕೂ ಹೆಚ್ಚು ಕಾರ್ಯಕರ್ತರ ಮೇಲೆ ಬಿಎನ್‌ಎಸ್ (BNS) 2023ರ ವಿವಿಧ ಕಠಿಣ ಕಲಂಗಳು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ತಡೆ ಕಾಯ್ದೆಯಡಿ ಮೊಕದ್ದಮೆ ಹೂಡಲಾಗಿದೆ.
PublicNext
30/04/2026 06:43 pm
LOADING...