ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾಲಾ ಬಸ್‌ನಿಂದ ಇಳಿದ ಮಗುವಿಗೆ ಗುದ್ದಿದ ಯಮಸ್ವರೂಪಿ ಬೈಕ್! ಹಾರಿ ಬಿದ್ದ ಬಾಲಕ

ಪಂಜಾಬ್‌ನ ಹೋಶಿಯಾರಪುರದಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಶಾಲಾ ವಲಯಗಳಲ್ಲಿನ ಅತಿವೇಗದ ಅಪಾಯವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ. ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಬಾಲಕನಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಆತ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಭೀಕರ ಅಪಘಾತದ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನೋಡಿದವರ ಎದೆ ನಡುಗಿಸುವಂತಿವೆ.

ಹೌದು ಮಧ್ಯಾಹ್ನ ಶಾಲಾ ಅವಧಿ ಮುಗಿದ ನಂತರ, ಊನಾ ರಸ್ತೆ ಬಳಿ ಬಾಲಕನೊಬ್ಬ ತನ್ನ ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟಲು ಪ್ರಯತ್ನಿಸುತ್ತಿದ್ದನು. ಈ ಸಂದರ್ಭದಲ್ಲಿ, ಬಸ್ ನಿಂತಿರುವುದನ್ನೂ ಲೆಕ್ಕಿಸದೆ ಹಿಂದಿನಿಂದ ಅತಿ ವೇಗವಾಗಿ ಬಂದ ಮೋಟಾರ್‌ಸೈಕಲ್ ಸವಾರ, ಬಾಲಕನಿಗೆ ಡಿಕ್ಕಿ ಹೊಡೆದಿದ್ದಾನೆ.

ಅಪಘಾತದ ಭೀಕರ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿವೆ. ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಬಾಲಕ ಗಾಳಿಯಲ್ಲಿ ಹಾರಿ ರಸ್ತೆಯ ಮೇಲೆ ಬಿದ್ದಿರುವುದು ವಿಡಿಯೋದಲ್ಲಿ ಕಂಡುಬಂದಿದ್ದು, ಈ ದೃಶ್ಯ ನೋಡಿದವರ ಮನ ಕಲಕುವಂತಿದೆ. ಕೂಡಲೇ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಶಾಲಾ ವಲಯಗಳಲ್ಲಿ ಮತ್ತು ಶಾಲಾ ಬಸ್‌ಗಳು ನಿಲ್ಲುವ ಸ್ಥಳಗಳಲ್ಲಿ ವಾಹನಗಳ ವೇಗಕ್ಕೆ ಮಿತಿ ಇರಬೇಕು ಎಂಬ ನಿಯಮವಿದ್ದರೂ, ಅನೇಕ ಸವಾರರು ಇದನ್ನು ಪಾಲಿಸುತ್ತಿಲ್ಲ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳು ಪೋಷಕರಲ್ಲಿ ಭೀತಿ ಹುಟ್ಟಿಸಿದ್ದು, ಮಕ್ಕಳ ಸುರಕ್ಷತೆ ಬಗ್ಗೆ ಗಂಭೀರ ಕಳವಳ ಮೂಡಿಸಿವೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನಿರ್ಲಕ್ಷ್ಯದಿಂದ ಅಪಘಾತಕ್ಕೆ ಕಾರಣನಾದ ಬೈಕ್ ಸವಾರನ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವ ಸಾಧ್ಯತೆಯಿದೆ.

Edited By : Nirmala Aralikatti
PublicNext

PublicNext

30/04/2026 07:23 pm

Cinque Terre

5.26 K

Cinque Terre

0