ಭಟ್ಕಳ: ತಾಲೂಕಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ.
ದೂರುದಾರೆಯ ಪ್ರಕಾರ, ಜಾಲಿ ಗ್ರಾಮದ ನಿವಾಸಿ ಜಗದೀಶ ರಾಮ ನಾಯ್ಕ ಎಂಬಾತನು ಈ ವರ್ಷದ ಜನವರಿ ತಿಂಗಳಲ್ಲಿ ಮಧ್ಯಾಹ್ನ ವೇಳೆ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಘಟನೆ ಬಗ್ಗೆ ಯಾರಿಗೂ ತಿಳಿಸಬಾರದೆಂದು ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ವಿಷಯ ಇಷ್ಟು ದಿನ ಬಹಿರಂಗವಾಗಿರಲಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಘಟನೆಯ ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಆರೋಪಿತನ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮಹಿಳೆ ಪೊಲೀಸರಲ್ಲಿ ಮನವಿ ಮಾಡಿದ್ದಾರೆ. ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Kshetra Samachara
30/04/2026 07:33 pm
LOADING...