ಧಾರವಾಡ: ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅವ್ಯವಹಾರದಲ್ಲಿ ತೊಡಗಿರುವ ಮುಖ್ಯ ಶಿಕ್ಷಕಿ ಶಾಂತಾ ಹೂಗಾರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಇದಕ್ಕೆ ಬೆಂಬಲವಾಗಿ ನಿಂತಿರುವ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್ ಎಸ್ ಕೆಳದಿಮಠ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸದಸ್ಯರು ಆಗ್ರಹಿಸಿದ್ದಾರೆ.
ಧಾರವಾಡದಲ್ಲಿ ಈ ಕುರಿತು ಮಾತನಾಡಿದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಬಸವರಾಜ ಲಗಮ್ಮನವರ ಅವರು, ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕಿ ಶಾಂತಾ ಹೂಗಾರ ವಿರುದ್ಧ ಈಗಾಗಲೇ ಶಿಕ್ಷಣ ಇಲಾಖೆ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಶಾಲೆಯಲ್ಲಿ ಹಣಕಾಸಿನ ಅವ್ಯವಹಾರ ಹಾಗೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಮುಖ್ಯ ಶಿಕ್ಷಕಿ ಶಾಂತಾ ಹೂಗಾರ ಅವರನ್ನು ಅಮಾನತು ಮಾಡಲು ಆಗ್ರಹಿಸಲಾಗಿದೆ. ಆದರೂ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್ ಎಸ್ ಕೆಳದಿಮಠ ಅವರು ಶಾಂತಾ ಹೂಗಾರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ, ಈಗಾಗಲೇ ಹಲವಾರು ಬಾರಿ ಮನವಿ ಮಾಡಿದರು ಇದಕ್ಕೆ ಸ್ಪಂದಿಸುತ್ತಿಲ್ಲ ಈ ಕುರಿತು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
30/04/2026 08:16 pm
LOADING...