ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ - ಕಿಮ್ಸ್ ಆಸ್ಪತ್ರೆಗೆ ದಾಖಲು..!!

ಹುಬ್ಬಳ್ಳಿ: ರಸ್ತೆ ದಾಟುತ್ತಿದ್ದ ಪಾದಚಾರಿಯೋರ್ವನಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಅಮರಗೋಳ ಮೆಟ್ರೋ ಹೋಲ್ ಸೇಲ್ ಶಾಪ್ ಬಳಿ ನಡೆದಿದೆ.

ಗಾಯಗೊಂಡ ವ್ಯಕ್ತಿಯನ್ನು ಗದಗ ಮೂಲದ ಶಿವಕುಮಾರ್ ಪಾಪನಾಳ (60) ಎಂದು ಗುರುತಿಸಲಾಗಿದೆ. ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಅತಿ ವೇಗವಾಗಿ ಬಂದ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾಲಿಗೆ ಬಲವಾದ ಪೆಟ್ಟು ಬಿದ್ದು ಮೂಳೆ ಮುರಿದಿದೆ.

ಸದ್ಯ ಗಾಯಗೊಂಡ ಶಿವಪ್ಪನನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಸವಾರರನ್ನು ವಶಕ್ಕೆ ಪಡೆದ ಉತ್ತರ ಸಂಚಾರಿ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂತೋಷ್ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ

Edited By : Nagaraj Tulugeri
Kshetra Samachara

Kshetra Samachara

30/04/2026 08:21 pm

Cinque Terre

7.83 K

Cinque Terre

0

ಸಂಬಂಧಿತ ಸುದ್ದಿ