ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ IBMR ಶಿಕ್ಷಣ ಸಂಸ್ಥೆಯಲ್ಲಿ “ಸಮನ್ವಯ-2026” ಕಾರ್ಯಕ್ರಮ ಯಶಸ್ವಿ : ಗಣ್ಯಾತಿ ಗಣ್ಯರ ಆಗಮನ

ಹುಬ್ಬಳ್ಳಿಯ ಐಬಿಎಮ್ಆರ್ ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದರ ಜೊತೆ ಕಲ್ಚರಲ್ ಕಾರ್ಯಕ್ರಮ ಮಾಡಿ, ವಿದ್ಯಾರ್ಥಿಗಳಿಗೆ ಇನ್ನೊಂದು ಲೋಕ ತೋರಿಸುವಂತಹ ಮಹತ್ವದ ಕಾರ್ಯಕ್ರಮ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ಗಣ್ಯಾತಿಗಣ್ಯರು ಆಗಮಿಸಿದ್ದರು.

IBMR ಶಿಕ್ಷಣ ಸಂಸ್ಥೆಯಲ್ಲಿ ಕಲಾ ಶಿಕ್ಷಣ ಕಾನೂನಾತ್ಮಕ ವಿಭಾಗದ ವತಿಯಿಂದ “ಸಮನ್ವಯ 2026 – ಪ್ರತಿಭಾ ಅನ್ವೇಷಣಾ ಕಾರ್ಯಕ್ರಮ”ವನ್ನು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದ ಉದ್ಘಾಟಕರಾಗಿ ಕರ್ನಾಟಕ ಜನಪದ ವಿಶ್ವವಿದ್ಯಾಲಯದ ಕುಲಪತಿಗಳು ಪ್ರೊಫೆಸರ್ ಟಿಎಂ ಭಾಸ್ಕರ್ ಅವರು ಭಾಗವಹಿಸಿ, ವಿದ್ಯಾರ್ಥಿಗಳಿಗೆ ಸಮತೋಲನಯುತ ಸಾಮಾಜಿಕತೆ, ಶ್ರದ್ಧೆ ಮತ್ತು ಮಾನಸಿಕ ಒತ್ತಡ ನಿರ್ವಹಣೆಯ ಮಹತ್ವದ ಕುರಿತು ಪ್ರೇರಣಾದಾಯಕವಾಗಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಜನಪ್ರಿಯ ಶಾಸಕರಾದ ಮಹೇಶ್ ತೆಂಗಿನಕಾಯಿ ಅವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದಾಗ ಮಾತ್ರ ಅವರ ವ್ಯಕ್ತಿತ್ವ ಸರ್ವತೋಮುಖವಾಗಿ ವಿಕಸನಗೊಳ್ಳುತ್ತದೆ ಎಂದು ಹೇಳಿದರು. ಇನ್ನೊಬ್ಬ ಮುಖ್ಯ ಅತಿಥಿಯಾಗಿ ಹುಬ್ಬಳ್ಳಿ-ಧಾರವಾಡದ ಐಪಿಎಸ್ ಅಧಿಕಾರಿಯಾಗಿರುವ ಡೆಪ್ಯೂಟಿ ಕಮಿಷನರ್ ಆಫ್ ಪೊಲೀಸ್ ಶೃತಿ ಎನ್ ಎಸ್ ಅವರು ವಿದ್ಯಾರ್ಥಿಗಳು ನಿರಂತರ ಪರಿಶ್ರಮ ಮತ್ತು ದೃಢ ಸಂಕಲ್ಪದ ಮೂಲಕ ತಮ್ಮ ಗುರಿಗಳನ್ನು ಸಾಧಿಸಬಹುದು ಎಂದು ಹುರಿದುಂಬಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಸ್ಥಾಪಕರಾದ ವಿನಯ್ ಚಂದ್ರ ಮಹೇಂದ್ರಕರ್ ವಹಿಸಿಕೊಂಡರು.

ಬೈಟ್- ಟಿಎಂ ಭಾಸ್ಕರ್, ಕರ್ನಾಟಕ ಜನಪದ ವಿಶ್ವವಿದ್ಯಾಲಯದ ಕುಲಪತಿಗಳು.

ಬೈಟ್- ಮಹೇಶ್ ತೆಂಗಿನಕಾಯಿ, ಶಾಸಕರು.

ಇನ್ನು ಐಬಿಎಮ್ಆರ್ ಸಮನ್ವಯ-2026 ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎ. ಎಂ. ಖಾನ್ ಅವರು ಭಾಗವಹಿಸಿ, ವಿದ್ಯಾರ್ಥಿಗಳಿಗೆ ವಿವಿಧ ವಿಭಾಗಗಳಲ್ಲಿ ಸಾಧನೆಗೈದವರಿಗೆ ಪ್ರಶಸ್ತಿಗಳನ್ನು ಪ್ರದಾನಿಸಿದರು. ತಮ್ಮ ಭಾಷಣದಲ್ಲಿ ಅವರು ವಿದ್ಯಾರ್ಥಿಗಳಲ್ಲಿ ಶಿಸ್ತು, ಪರಿಶ್ರಮ ಮತ್ತು ಸಮನ್ವಯದ ಮನೋಭಾವ ಬೆಳೆಸಿಕೊಳ್ಳುವ ಅಗತ್ಯವನ್ನು ಒತ್ತಿಹೇಳಿದರು.ಇನ್ನೋರ್ವ ಮುಖ್ಯ ಅತಿಥಿಯಾಗಿ ಡಾ. ಎಚ್. ವಿ. ಬೆಳಗಲಿ ಅವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಇಂತಹ ಕಾರ್ಯಕ್ರಮಗಳು ಮಹತ್ವಪೂರ್ಣವೆಂದು ಅಭಿಪ್ರಾಯಪಟ್ಟರು.

ಸಮನ್ವಯ 2026ರ ಅಂಗವಾಗಿ ನಡೆದ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ತೋರಿದ ಸಂಸ್ಥೆಗಳಿಗೆ “ಸಮಗ್ರ ವೀರಾಗ್ರಹಣಿ” ಪ್ರಶಸ್ತಿಗಳನ್ನು ಪ್ರದಾನಿಸಲಾಯಿತು. ಸೋನಿಯಾ ಬಿ.ಎಡ್ ಕಾಲೇಜು ಸಮಗ್ರ ವೀರಾಗ್ರಹಣಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರೆ, ಉರ್ಕುಡ್ಲಿ ಅಜ್ಜ ಕಾನೂನು ಮಹಾವಿದ್ಯಾಲಯವು ಕೂಡ ಇದೇ ಗೌರವವನ್ನು ಪಡೆದು ಗಮನ ಸೆಳೆಯಿತು.

ಈ ಸಂದರ್ಭದಲ್ಲಿ ಡಾ. ಇಗ್ನೇಶ್ ಸಕ್ರಿ, ಡಾ. ಅರುಣ್ ಶೆಟ್ಟಿ, ಡಾ. ಶಂಕರ್ ಚಕ್ರವರ್ತಿ, ಡಾ. ಎಸ್.ವಿ. ಸೋಗಿ ಹಾಗೂ ಪ್ರೊಫೆಸರ್ ಅಣ್ಣಪ್ಪ ಕೊರವರ್ ಉಪಸ್ಥಿತರಿದ್ದರು. ಸ್ವಾಗತವನ್ನು ಅಣ್ಣಪ್ಪ ಕೊರವರ್ ನೆರವೇರಿಸಿದರು. ವಂದನಾರ್ಪಣೆಯನ್ನು ಡಾ. ಅರುಣ್ ಶೆಟ್ಟಿ ಅವರು ಸಲ್ಲಿಸಿದರು. ಕಾರ್ಯಕ್ರಮವನ್ನು ಕುಮಾರಿ ಓಂಕಾರೇಶ್ವರಿ ಅವರು ಸಮರ್ಪಕವಾಗಿ ನಿರೂಪಿಸಿದರು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕತೆ, ಆತ್ಮವಿಶ್ವಾಸ ಮತ್ತು ಪ್ರತಿಭೆಯನ್ನು ಉತ್ತೇಜಿಸುವ ಮಹತ್ವದ ವೇದಿಕೆಯಾಗಿದ್ದು, ಎಲ್ಲರಿಂದ ಪ್ರಶಂಸೆಗೆ ಪಾತ್ರವಾಯಿತು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

30/04/2026 08:27 pm

Cinque Terre

10.76 K

Cinque Terre

0

ಸಂಬಂಧಿತ ಸುದ್ದಿ