ಬೆಂಗಳೂರು: ನಿನ್ನೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ದುರಂತ ಸಾವಿಗೀಡಾದ ಘಟನೆ ಹಿನ್ನೆಲೆ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಈ ಘಟನೆ ಸಂಭವಿಸಿದೆ ಎಂಬುದನ್ನು ನಾನು ಒಪ್ಪಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರೀ ಪ್ರಮಾಣದ ಮಳೆಯಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದರು. ಇನ್ನು, ಇಂಥ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
PublicNext
30/04/2026 08:37 pm
LOADING...