ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪೊಕ್ಸೊ ಪ್ರಕರಣದ ಅಪರಾಧಿಗೆ ಮರಣದಂಡನೆ ಕಡಿಮೆ ಮಾಡಿ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಧಾರವಾಡ: ಈಗಾಗಲೇ ಪೊಕ್ಸೊ ಪ್ರಕರಣದಡಿ ಅಪರಾಧಿ ಎಂದು ಪರಿಗಣಿಸಲ್ಪಟ್ಟು ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಗೆ ಧಾರವಾಡದ ಹೈಕೋರ್ಟ್ ಪೀಠವು ಮರಣದಂಡನೆ ಕಡಿಮೆ ಮಾಡಿ ಜೀವಾವಧಿ ಶಿಕ್ಷೆ ವಿಧಿಸಿದೆ.

2017ರಲ್ಲಿ ಬೆಳಗಾವಿ ಜಿಲ್ಲೆಯ ಹಾರೋಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ದಪ್ಪ ಗಾಣಿಗೇರ (39) ಎಂಬ ಅಪರಾಧಿ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಕೊಲೆ ಮಾಡಿದ್ದ.

ಈ ಹಿನ್ನೆಲೆ ಪೊಲೀಸರು ದೋಷಾರೋಪಣಾ ಪಟ್ಟಿಯನ್ನು ಬೆಳಗಾವಿ ಜಿಲ್ಲಾ ಮತ್ತು ಸತ್ರ ತ್ವರಿತ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಅಪರಾಧಿಗೆ ಮರಣ ದಂಡನೆ ಶಿಕ್ಷೆ ಪ್ರಕಟಿಸಿತ್ತು.

ಈ ಶಿಕ್ಷೆ ಪ್ರಮಾಣ ಕಡಿಮೆ ಮಾಡುವಂತೆ ಕೋರಿ ಅಪರಾಧಿ ಉದ್ದಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದ. ಈ ಪ್ರಕರಣದ ಕೂಲಂಕುಷ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ ಮರಣದಂಡನೆ ಕಡಿಮೆ ಮಾಡಿ ಜೀವಾವಧಿ ಶಿಕ್ಷೆ ವಿಧಿಸಿದೆ. ಅಲ್ಲದೇ ಕೊಲೆಯಾದ ಬಾಲಕಿ ಕುಟುಂಬಕ್ಕೆ ಕಾನೂನು ಸೇವಾ ಪ್ರಾಧಿಕಾರ ಐದು ಲಕ್ಷ ಪರಿಹಾರ ನೀಡಲು ಆದೇಶಿಸಿದೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

30/04/2026 08:57 pm

Cinque Terre

9.16 K

Cinque Terre

0

ಸಂಬಂಧಿತ ಸುದ್ದಿ