ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪ್ರತ್ಯೇಕ ಪಾಲಿಕೆಗೆ ಬಿಜೆಪಿಗರ ವಿರೋಧ ಆರೋಪ: ಪಾಲಿಕೆ ಸದಸ್ಯರಿಂದ ಪ್ರತಿಭಟನೆ

ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಘೋಷಣೆ ಮಾಡಲಾಗಿತ್ತು. ಆದರೆ, ಇದಕ್ಕೆ ರಾಜ್ಯಪಾಲರು ಅಂಕಿತ ಹಾಕದೇ ಇರುವಂತೆ ಬಿಜೆಪಿ ನಾಯಕರು ಪ್ರಭಾವ ಬೀರಿದ್ದಾರೆ ಎಂದು ಆರೋಪಿಸಿ ಪಾಲಿಕೆಯ ಕಾಂಗ್ರೆಸ್ ಸದಸ್ಯರು, ಧಾರವಾಡ ಪ್ರತ್ಯೇಕ ಪಾಲಿಕೆ ಹೋರಾಟ ವೇದಿಕೆ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಧಾರವಾಡ ಜ್ಯುಬಿಲಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕ ಅರವಿಂದ ಬೆಲ್ಲದ, ಮೇಯರ್ ಜ್ಯೋತಿ ಪಾಟೀಲ ಹಾಗೂ ಮಾಜಿ ಮೇಯರ್ ಈರೇಶ ಅಂಚಟಗೇರಿ ಅವರ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಮಾಡದೇ ಇರುವಂತೆ ಈ ನಾಯಕರು ಪ್ರಭಾವ ಬೀರುತ್ತಿದ್ದಾರೆ. ಸರ್ಕಾರ ಈ ಹಿಂದೆಯೇ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಘೋಷಣೆ ಮಾಡಿ ಗೆಜೆಟ್ ನೋಟಿಫಿಕೇಶನ್ ಕೂಡ ಹೊರಡಿಸಿತ್ತು. ಆದರೆ, ಅದಕ್ಕೆ ರಾಜ್ಯಪಾಲರು ಅಂಕಿತ ಹಾಕುವುದು ಬಾಕಿ ಉಳಿದಿದೆ. ಆದರೆ, ಅದಕ್ಕೆ ಒಪ್ಪಿಗೆ ಸೂಚಿಸದಂತೆ ರಾಜ್ಯಪಾಲರ ಮೇಲೆ ಬಿಜೆಪಿ ನಾಯಕರು ಪ್ರಭಾವ ಬೀರಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲೂ ಪ್ರತ್ಯೇಕ ಮಹಾನಗರ ಪಾಲಿಕೆ ಸಂಬಂಧ ಚರ್ಚೆಗೆ ಅವಕಾಶವನ್ನೇ ನೀಡಿಲ್ಲ. ಮೇಯರ್ ಜ್ಯೋತಿ ಪಾಟೀಲ ಅವರು ಕೇಂದ್ರ ಸಚಿವ ಜೋಶಿ ಅವರು ಹೇಳಿದಂತೆಯೇ ಕೇಳುತ್ತಿದ್ದಾರೆ. ನಾವು ಯಾವುದೇ ಕಾರಣಕ್ಕೂ ಬೃಹತ್ ಮಹಾನಗರ ಪಾಲಿಕೆ ಮಾಡಲು ಬಿಡದೇ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಮಾಡಿಯೇ ಮಾಡುತ್ತೇವೆ ಎಂದು ಪ್ರತಿಭಟನಾಕಾರರು ಜ್ಯುಬಿಲಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಕೊನೆಗೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ದು ನಂತರ ಬಿಡುಗಡೆಗೊಳಿಸಿದರು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

30/04/2026 09:34 pm

Cinque Terre

8.19 K

Cinque Terre

0

ಸಂಬಂಧಿತ ಸುದ್ದಿ