ದೊಡ್ಡಬಳ್ಳಾಪುರ : ಜೆಡಿಎಸ್ ಪಕ್ಷಕ್ಕೆ 25 ವರ್ಷ ತುಂಬಿದ ಹಿನ್ನೆಲೆ ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಬೆಳ್ಳಿಹಬ್ಬವನ್ನು ಆಯೋಜನೆ ಮಾಡಲಾಗುತ್ತಿದೆ. ಮೇ 8 ರಂದು ನಡೆಯುವ ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ ಭಾಗವಹಿಸುತ್ತಿದ್ದಾರೆ, ನಿಷ್ಠಾವಂತ ಕಾರ್ಯಕರ್ತರನ್ನ ಕಡೆಗಣನೆ ಮಾಡಿರುವ ಕಾರಣಕ್ಕೆ ತಾಲೂಕಿನಲ್ಲಿ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ, ಮುನೇಗೌಡ ಮತ್ತು ಹುಸ್ಕೂರ್ ಆನಂದ್ ಬೆಂಬಲಿಗರು ಕಾರ್ಯಕ್ರಮ ಬಹಿಷ್ಕಾರದ ಎಚ್ಚರಿಕೆಯನ್ನ ಹೈಕಮಾಂಡ್‌ಗೆ ರವಾನಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿ ದೊಡ್ಡಬಳ್ಳಾಪುರಕ್ಕೆ ಆಗಮಿಸುತ್ತಿರುವ ಹಿನ್ನೆಲೆ, ಸಾಸಲು ಹೋಬಳಿಯ ಹೊಸಹಳ್ಳಿಯಲ್ಲಿ ಕಾರ್ಯಕರ್ತರ ಪೂರ್ವಭಾವಿ ಸಭೆ ನಡೆಸಲಾಗಿತ್ತು, ಸಭೆಯಲ್ಲಿ 500ಕ್ಕೂ ಕಾರ್ಯಕರ್ತರು ಭಾಗವಹಿಸಿದ್ದರು, ನೂತನವಾಗಿ ಆಯ್ಕೆಯಾಗಿರುವ ಜಿಲ್ಲಾಧ್ಯಕ್ಷ ಮಂಜುನಾಥ್, ತಾಲೂಕು ಅಧ್ಯಕ್ಷ ಹರೀಶ್ ಗೌಡರ ವಿರುದ್ಧ ಅಕ್ರೋಶವನ್ನ ಹೊರಹಾಕಿದ್ದಾರೆ.
ಈ ಹಿಂದಿನ ಜಿಲ್ಲಾಧ್ಯಕ್ಷರಾದ ಮುನೇಗೌಡರನ್ನು ಏಕಾಏಕಿ ಕೆಳಗೆ ಇಳಿಸಿದ್ದು, ಕಾರ್ಯಕರ್ತರ ಅಭಿಪ್ರಾಯ ಕೇಳದೆ ಹರೀಶ್ ಗೌಡರನ್ನ ತಾಲೂಕು ಅಧ್ಯಕ್ಷರನ್ನಾಗಿ ಘೋಷಣೆ ಮಾಡಿರುವುದು ಕಾರ್ಯಕರ್ತರ ಅಕ್ರೋಶಕ್ಕೆ ಕಾರಣವಾಗಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಪಕ್ಷದಲ್ಲಿನ ಸ್ಥಾನಗಳನ್ನು ನೀಡಲಾಗಿದೆ, ಕೋರ್ ಕಮಿಟಿ ಅಧ್ಯಕ್ಷರಾದ ಕೃಷ್ಣಾರೆಡ್ಡಿ ತಾಲೂಕಿನ ವಾಸ್ತವ ಸ್ಥಿತಿ ತಿಳಿಯದೆ ಪಕ್ಷ ವಿರೋಧಿಗಳೊಂದಿಗೆ ಶಾಮೀಲಾಗಿದ್ದಾರೆ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರನ್ನ ಕರೆದು ಸಭೆ ನಡೆಸಿ ಸಮಸ್ಯೆಗಳನ್ನ ಈಡೇರಿಸದಿದ್ದಲ್ಲಿ ನಿಖಿಲ್ ಕುಮಾರಸ್ವಾಮಿ ಕಾರ್ಯಕ್ರಮಕ್ಕೆ ನಿಷ್ಠಾವಂತರ ಕಾರ್ಯಕರ್ತರು ಬೆಂಬಲಿಗರು ಕಾರ್ಯಕ್ರಮದಿಂದ ದೂರ ಸರಿಯುವುದಾಗಿ ಎಚ್ಚರಿಕೆ ನೀಡಿದ್ದಾರೆ.
PublicNext
30/04/2026 10:11 pm
LOADING...