ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿಯ ಗಾಣಕಲ್ ಗ್ರಾಮದಲ್ಲಿ ಜೋರು ಮಳೆಗೆ ರೈತರ ಬೆಳೆಗಳು ನಾಶವಾಗಿವೆ. ಬಾಳೆ ಹಾಗೂ ತೆಂಗಿನಮರಗಳು ನೆಲಕ್ಕುರುಳಿವೆ. ಇದರ ಜೊತೆಗೆ ಮನೆಗಳ ಮೇಲೆ ಮರಬಿದ್ದಿದ್ದು, ರೈತರಿಗೆ ಅಪಾರ ನಷ್ಟವಾಗಿದೆ. ಜೊತೆಗೆ ಗ್ರಾಮದಲ್ಲಿ ಕೆಲ ವಿದ್ಯುತ್ ಕಂಬಗಳು ಸಹ ಜಖಂ ಆಗಿವೆ. ಇನ್ನು ಈ ಬಗ್ಗೆ ಜಿಲ್ಲಾಡಳಿತ ಗಮನಹರಿಸಿ ಸೂಕ್ತ ಪರಿಹಾರ ಕೊಡಬೇಕೆಂದು ನೊಂದವರು ಮನವಿ ಮಾಡಿದ್ದಾರೆ. ಜೊತೆಗೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಗಾಣಕಲ್ ನಟರಾಜ್ ಸಹ ಪರಿಹಾರಕ್ಕಾಗಿ ಒತ್ತಾಯಿಸಿದ್ದಾರೆ.
Kshetra Samachara
30/04/2026 10:20 pm